ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆಯುವ ಬೃಹತ್ ಸಮ್ಮೇಳನ ಒಂದರಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.
ಹಾಸನ [ಡಿ.28]: ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕಾನೂನು ಸಚಿವ ಮಾದುಸ್ವಾಮಿ ಹೇಳಿದರು.
ಹಾಸನದಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಮಾಧುಸ್ವಾಮಿ ಜನವರಿ 2 ರಂದು ಪ್ರಧಾನಿ ಮೋದಿ ತುಮಕೂರಿಗೆ ಆಗಮಿಸಲಿದ್ದಾರೆ. ಅಂದು ನಡೆಯುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ವಿವಿಧ ಜಿಲ್ಲೆಗಳ ಆಸಕ್ತ ರೈತರು ಕೂಡ ಆಗಮಿಸಲಿದ್ದಾರೆ ಎಂದರು.
undefined
ಇನ್ನು ಕನಕಪುರದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಮಾಧುಸ್ವಾಮಿ , ಮೂರ್ತಿ ನಿರ್ಮಾಣ ಮಾಡುವುದು ಅವರ ಭಾನೆಗಳಿಗೆ ಬಿಟ್ಟ ವಿಚಾರವಾಗಿದೆ. ಆದರೆ ಇದಕ್ಕೆ ಸರ್ಕಾರಿ ಭೂಮಿಯನ್ನು ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಈ ಭೂಮಿಯನ್ನು ವಾಪಸ್ ಪಡೆಯುವ ಬಗ್ಗೆ ಕಂದಾಯ ಸಚಿವರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.
ಗೋಮಾಳ ಭೂಮಿಯನ್ನು ಈ ರೀತಿಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಸರ್ಕಾರಿ ಭೂಮಿಯನ್ನು ಹೀಗೆ ಬಳಕೆ ಮಾಡಿಕೊಂಡರೆ ಕೋರ್ಟ್ ಕೂಡ ಒಪ್ಪುವುದಿಲ್ಲ. ಪ್ರತಿಮೆ ಮಾಡಬಾರದು ಎಂದು ಹೇಳಿಲ್ಲ. ಆದರೆ ಸರ್ಕಾರ ಭೂಮಿಯನ್ನು ಹೋಗೆ ಬಳಸುವುದು ಸರಿಯಲ್ಲ ಎಂದರು.
ಫ್ರೆಂಡ್‌ಶಿಪ್ ಬೇರೆ, ಪಾಲಿಟಿಕ್ಸ್ ಬೇರೆ , ಡಿಕೆಶಿ ಭೇಟಿ ಬಗ್ಗೆ ಮಾಧುಸ್ವಾಮಿ ಸ್ಪಷ್ಟನೆ...
ಇನ್ನು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿಚಾರವಾಗಿಯೂ ಪ್ರತಿಕ್ರಿಯಿಸಿ, ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಸಿಎಂ ಹೇಳಿದ್ದಾರೆ. ಘೋಷಣೆ ಆಗದಿದ್ದ ಮೇಲೆ ವಾಪಸ್ ತೆಗೆದುಕೊಳ್ಳುವ ಪ್ರಶ್ನೆ ಎಲ್ಲಿಂದ ಬರಲಿದೆ. ಅಮಾಯರಾದರೆ ಮಾತ್ರ ಪರಿಹಾರ ನೀಡುತ್ತೇವೆ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಅವರೂ ಹಿಂಸಾಚಾರದ ಆರೋಪಿಗಳಾಗಿದ್ದಲ್ಲಿ ಪರಿಹಾರ ನೀಡಲು ಹೇಗೆ ಸಾಧ್ಯ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ