8 ರಂದೇ ಮೈಸೂರಿಗೆ ಪ್ರಧಾನಿ ಭೇಟಿ : ಬಂಡೀಪುರದಲ್ಲಿ ಸಫಾರಿ, ಬೊಮ್ಮಾಯಿ ದಂಪತಿ ಭೇಟಿ

By Kannadaprabha News  |  First Published Apr 5, 2023, 7:58 AM IST

ಪ್ರಧಾನಿ ನರೇಂದ್ರ ಮೋದಿಯವರು ಏ.8 ರಂದು ವಿಶೇಷ ವಿಮಾನದಲ್ಲಿ ಆಗಮಿಸಿ, ಮೈಸೂರಿನಲ್ಲಿ ವಾಸ್ತವ್ಯ ಹೂಡುವರು ಎಂದು ಅರಣ್ಯ ಇಲಾಖೆಯ ಮೂಲಗಳಿಂದ ಗೊತ್ತಾಗಿದೆ.


 ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರು ಏ.8 ರಂದು ವಿಶೇಷ ವಿಮಾನದಲ್ಲಿ ಆಗಮಿಸಿ, ಮೈಸೂರಿನಲ್ಲಿ ವಾಸ್ತವ್ಯ ಹೂಡುವರು ಎಂದು ಅರಣ್ಯ ಇಲಾಖೆಯ ಮೂಲಗಳಿಂದ ಗೊತ್ತಾಗಿದೆ.

ಮರುದಿನ ಏ.9ರಂದು ಬೆಳಗ್ಗೆ 6ಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂಡೀಪುರಕ್ಕೆ ತೆರಳುವರು. ಸಫಾರಿಯಲ್ಲಿ ಪಾಲ್ಗೊಂಡು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಸಂವಾದ ನಡೆಸುವರು. ನಂತರ ಮಧುಮಲೈ ಅರಣ್ಯದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿ, ಬೊಮ್ಮ ಮತ್ತು ತಂಡವನ್ನು ಭೇಟಿ ಮಾಡುವರು.

Latest Videos

undefined

ಆ ಶಿಬಿರದಲ್ಲಿರುವ ಬೊಮ್ಮ ಮತ್ತು ಬೆಳ್ಳಿ ದಂಪತಿ ಆನಾಥ ಆನೆ ಮರಿಗಳ ಆರೈಕೆಗಾಗಿ ಜೀವನ ಮುಡಿಪಾಗಿಟ್ಟಿದ್ದಾರೆ. ಈ ಕುರಿತು ನಿರ್ಮಿಸಿದ ದಿ ಎಲಿಪೆಂಟ್‌ ವಿಸ್ಪರರ್ಸ್‌ ಸಾಕ್ಷ್ಯಚಿತ್ರಕ್ಕೆ ಆಸ್ಕರ್‌ ಪ್ರಶಸ್ತಿ ದೊರೆತಿದೆ. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಮತ್ತೆ ಮೈಸೂರಿಗೆ ಆಗಮಿಸುವರು. ಬೆಳಗ್ಗೆ 10ಕ್ಕೆ ಕರ್ನಾಟಕ ರಾಜ್ಯ ಮಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆಯ 50ನೇ ವರ್ಷದ ಸಂಭ್ರಮದಲ್ಲಿ ಪಾಲ್ಗೊಳ್ಳುವರು. ರಾಜ್ಯ ಮಾತ್ರವಲ್ಲದೇ ದೇಶದ ಮೂಲೆ ಮೂಲೆಗಳಿಂದ ಹಾಗೂ ವಿದೇಶಗಳಿಂದ ಪ್ರತಿನಿಧಿಗಳು ಪಾಲ್ಗೊಳ್ಳುವರು. ಮಧ್ಯಾಹ್ನ 1ಕ್ಕೆ ಪ್ರಧಾನಿಯವರು ಮೈಸೂರಿಂದ ನಿರ್ಗಮಿಸುವರು.

ಮೋದಿಯಿಂದ ದೇಶದಲ್ಲಿ ಭಾರಿ ಬದಲಾವಣೆ

ಬೆಂಗಳೂರು (ಏ.04): ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ದೇಶದಲ್ಲಿ ದೊಡ್ಡ ಬದಲಾವಣೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಲ್ಲೇಶ್ವರದ ಈಸ್ಟ್‌ ಪಾರ್ಕ್ ರಸ್ತೆಯ ಗಿರಿಜಾರಾಮ ದೈವಜ್ಞ ಭವನದಲ್ಲಿ ಸೋಮವಾರ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ. 

ಕರ್ನಾಟಕದಲ್ಲೂ ಉತ್ತಮ ಸಂಘಟನೆ ಹೊಂದಿರುವ ಬಿಜೆಪಿ ಬಹಳ ಆಳವಾಗಿ ಬೇರೂರಿರುವ ಪಕ್ಷವಾಗಿದೆ ಎಂದರು. ಹಿಂದೆ ದೇಶದಲ್ಲಿ ಇದ್ದ ಯುಪಿಎ ಸರ್ಕಾರ ದೇಶದಲ್ಲಿ ಅಸ್ಥಿರತೆ ಉಂಟು ಮಾಡಿತ್ತು. ಆರ್ಥಿಕವಾಗಿ ಅಸ್ಥಿರತೆ ಉಂಟಾಗಿ ಭ್ರಷ್ಟಾಚಾರದ ಸುರಿಮಳೆಯೇ ಆಯಿತು. ಪ್ರತಿಯೊಬ್ಬ ನಾಗರಿಕನಿಗೆ ಆತ್ಮವಿಶ್ವಾಸ ಮೂಡಬೇಕು. ನಾವು ಸುರಕ್ಷಿತವಾಗಿ ಇದ್ದೇವೆ ಎಂಬ ಭಾವನೆ ಬರಬೇಕು. ಈ ನಿಟ್ಟಿನಲ್ಲಿ ದೇಶದಲ್ಲಿ ಅತಿ ಹೆಚ್ಚು ರಸ್ತೆ, ವಿಮಾನ ನಿಲ್ದಾಣ ಎಲ್ಲವೂ ಅಭಿವೃದ್ಧಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ್‌ ಬಗ್ಗೆ ಮಾತಾಡುವಾಗ ವಿರೋಧ ಪಕ್ಷಗಳು ಹಾಸ್ಯ ಮಾಡಿದವು. 

ಸಿದ್ದು ರೀತಿ ಎರಡು ಕಡೆ ಸ್ಪರ್ಧೆ ಮಾಡೋ ಅನಿವಾರ್ಯ ಪರಿಸ್ಥಿತಿ ನಮಗಿಲ್ಲ: ಡಾ.ಜಿ.ಪರಮೇಶ್ವರ್

ಒಂದು ಮನೆಯ ಸ್ವಚ್ಛತೆಯ ಬಗ್ಗೆ ಅರ್ಥ ಮಾಡಿಕೊಳ್ಳದೇ ಇರುವವರು 70 ವರ್ಷ ಆಡಳಿತ ಮಾಡಿದ್ದು ದುರ್ದೈವದ ಸಂಗತಿ ಎಂದು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದರು. ಚುನಾವಣೆಗೆ ಪಕ್ಷ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ನಾವು ಮಾಡಿದ ಸಾಧನೆಯ ವರದಿ ಹಿಡಿದು ಮತ ಕೇಳುತ್ತಿದ್ದೇವೆ. ಜತೆಗೆ ಕಾಂಗ್ರೆಸ್‌ನ ದುರಾಡಳಿತದ ಬಗ್ಗೆಯೂ ಜನರಿಗೆ ತಿಳಿಸಲಾಗುವುದು. ಕಾಂಗ್ರೆಸ್‌ನವರು ಧರ್ಮ ಒಡೆಯುವ ಕೆಲಸ ಮಾಡಿದರು. ಆದರೆ ನಾವು ಧರ್ಮಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ. 

ಕಾಂಗ್ರೆಸ್‌ ಸರ್ಕಾರ ಇದ್ದಾಗ ಕೋಮು ಗಲಭೆಗಳಾದವು. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿತ್ತು. ರಾಜ್ಯದ ಅಭಿವೃದ್ಧಿಯೇ ಆಗಿರಲಿಲ್ಲ. ಆ ಅವಧಿ ಕರಾಳ ದಿನಗಳಾಗಿದ್ದವು ಎಂದು ಹಿಂದಿನ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಚಿವರಾದ ರಾಜೀವ್‌ ಚಂದ್ರಶೇಖರ್‌, ಭಗವಂತ ಖೂಬಾ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.

click me!