ಜೈಲಲ್ಲಿ ಸೆಲ್ಫಿ ಕ್ಲಿಕ್ಕಿಸಿ ಫೇಸ್‌ಬುಕ್‌ಗೆ ಅಪ್‌ಲೋಡ್‌ ಮಾಡಿದ ಕೈದಿ!

Kannadaprabha News   | Asianet News
Published : Feb 27, 2020, 12:55 PM ISTUpdated : Feb 27, 2020, 01:09 PM IST
ಜೈಲಲ್ಲಿ ಸೆಲ್ಫಿ ಕ್ಲಿಕ್ಕಿಸಿ ಫೇಸ್‌ಬುಕ್‌ಗೆ ಅಪ್‌ಲೋಡ್‌ ಮಾಡಿದ ಕೈದಿ!

ಸಾರಾಂಶ

ಮೊಬೈಲ್‌ನಲ್ಲಿ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ ಕೈದಿ| ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದ ಘಟನೆ| ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ|

ಬೆಳಗಾವಿ(ಫೆ.27): ಹಿಂಡಲಗಾ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಂಡು, ಅದನ್ನು ತನ್ನ ಫೇಸ್‌ಬುಕ್‌ ಖಾತೆಗೆ ಅಪ್‌ಲೋಡ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯ ಟಿ.ಪಿ.ಮುತ್ತೇಶ ಎಂಬ ಕೈದಿಯೇ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದು, ಫೇಸ್‌ಬುಕ್‌ಗೆ ಅಪ್‌ಲೋಡ್‌ ಮಾಡಿದ್ದಾನೆ. 2016ರಲ್ಲಿ ತೊಪ್ಪನಹಳ್ಳಿಯಲ್ಲಿ ನಡೆದಿದ್ದ ಜೋಡಿ ಕೊಲೆ, 2018ರಲ್ಲಿ ಮದ್ದೂರಿನಲ್ಲಿ ನಡೆದಿದ್ದ ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ ಪ್ರಕರಣದ ಆರೋಪಿ ಈತ. ಕೈದಿಯೊಬ್ಬ ಮೊಬೈಲ್‌ ಬಳಸಿ ಸೆಲ್ಫಿ ತೆಗೆದಿದ್ದರೂ ಈತ ಯಾರು, ಹೇಗೆ ಮೊಬೈಲ್‌ ಬಳಸಿದ ಎನ್ನುವುದರ ಬಗ್ಗೆ ಮಾಹಿತಿಯೇ ಇಲ್ಲವೆಂದು ಜೈಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಸತ್ಯಾಸತ್ಯತೆ ಇನ್ನಷ್ಟೇ ಗೊತ್ತಾಗಬೇಕಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೀಗೆ ಕೈದಿಯೊಬ್ಬ ಜೈಲಿನಲ್ಲಿ ತನ್ನ ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೇಸ್‌ಬುಕ್‌ಗೆ ಅಪ್‌ಲೋಡ್‌ ಮಾಡಿರುವುದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!