ಬೆಳ್ಳಂಬೆಳಗ್ಗೆ ಖಾಸಗಿ ಬಸ್ - ಲಾರಿ ನಡುವೆ ಅಪಘಾತ

Published : Nov 28, 2019, 10:03 AM IST
ಬೆಳ್ಳಂಬೆಳಗ್ಗೆ ಖಾಸಗಿ ಬಸ್ - ಲಾರಿ ನಡುವೆ ಅಪಘಾತ

ಸಾರಾಂಶ

ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ (ನ.28): ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. 

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಲಾರಿಗೆ ವಿಆರ್ ಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಡಿಕ್ಕಿಯಾಗಿದೆ. 

ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬೆಳಗ್ಗಿನ ನಿದ್ದೆಯಲ್ಲಿದ್ದವರಿಗೆ ಅಪಘಾತವು ಆಘಾತ ನೀಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಪಘಾತದಲ್ಲಿ ಗಾಯಗೊಂಡವರನ್ನು ಹಿರಿಯೂರಿನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಚಿತ್ರದುರ್ಗ : ಭಾರಿ ಮಳೆಗೆ ಬೆಟ್ಟ ಕುಸಿದರೂ ಅಚ್ಚರಿ ರೀತಿಯಲ್ಲಿ ಉಳಿದ ಗರ್ಭಗುಡಿ..

ಈ ಸಂಬಂಧ ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!