ಖಾಸಗಿ ಆಸ್ಪತ್ರೆಗಳ ಕೊರೋನಾ ಚಿಕಿತ್ಸೆ ಹಾಸಿಗೆ ವಿವರ ವೆಬ್‌ಸೈಟ್‌ನಲ್ಲಿ ಲಭ್ಯ

By Kannadaprabha News  |  First Published Jul 15, 2020, 8:04 AM IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಬೆನ್ನಲೇ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿರುವ 5,859 ಹಾಸಿಗೆಗಳ ವಿವರವನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.


ಬೆಂಗಳೂರು(ಜು.15): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಬೆನ್ನಲೇ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿರುವ 5,859 ಹಾಸಿಗೆಗಳ ವಿವರವನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಳೆದ ಸೋಮವಾರ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಮೀಸಲಿಡಲಾಗಿರುವ ಹಾಸಿಗೆಗಳ ವಿವರವನ್ನು ಬಿಬಿಎಂಪಿ ವಾರ್‌ ರೂಂ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

Latest Videos

undefined

9 ದಿನ ಚಿಕಿತ್ಸೆಗೆ 9 ಲಕ್ಷ ಕೇಳಿದ ಖಾಸಗಿ ಆಸ್ಪತ್ರೆ..!

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 5,859 ಹಾಸಿಗೆ ಮತ್ತು ವೆಂಟಿಲೇಟರ್‌ಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲಾಗಿದೆ. ಅದರಲ್ಲಿ 3,150 ಸಾಮಾನ್ಯ ಹಾಸಿಗೆ, 2,092 ಹೈ-ಡಿಪೆಂಡೆನ್ಸಿ ಯುನಿಟ್‌ (ಎಚ್‌ಡಿಯು), 318 ಐಸಿಯು ಹಾಗೂ 299 ವೆಂಟಿಲೇಟರ್‌ಗಳಾಗಿವೆ.

ಬಿಬಿಎಂಪಿ ಆಯುಕ್ತರು ಮಂಗಳವಾರ https://chbms.bbmpgov.in/portal/reports/index.html ವೆಬ್‌ಸೈಟ್‌ ವಿಳಾಸವನ್ನು ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

click me!