ಮಕ್ಕಳನ್ನೇ ಕಾರ್ಮಿಕರನ್ನಾಗಿ ಮಾಡಿದ ಶಾಲೆ..!

By Kannadaprabha News  |  First Published Sep 9, 2019, 3:10 PM IST

ಚೆನ್ನಾಗಿ ಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ. ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ.


ಚಿಕ್ಕಬಳ್ಳಾಪುರ(ಸೆ.09): ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಡಿಕೆಶಿ ಅರೆಸ್ಟ್ : 20 ಕಾಂಗ್ರೆಸಿಗರಿಗೆ ಎದುರಾಯ್ತು ಸಂಕಷ್ಟ

Tap to resize

Latest Videos

ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೇರಿಸಿದರೆ, ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲಿಗೆ ವಿದ್ಯಾರ್ಥಿ ಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರ್ಯಾಕ್ಟರ್‌ಗೆ ಜಲ್ಲಿ ತುಂಬಿದ ಮಕ್ಕಳು:

ಶಾಲೆ ಆವ ರಣದಲ್ಲಿರುವ ಜಲ್ಲಿ ಕಲ್ಲುಗಳನ್ನು ವಿದ್ಯಾರ್ಥಿಗಳಿಂದ ಟ್ರ್ಯಾಕ್ಟರ್‌ಗೆ ತುಂಬಿಸುವ ಕೆಲಸಕ್ಕೆ ಮುಂದಾಗುವ ಮೂಲಕ ಶಿಕ್ಷಣ ಇಲಾಖೆ ನಿಯಮಾವಳಿ ಗಳನ್ನು ಉಲ್ಲಂಘಿಸಿರುವ ಚೇಳೂರಿನ ಅರವಿಂದ ಖಾಸಗಿ ಶಾಲೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಟ್ಟಡ ನಿರ್ಮಾಣಕ್ಕೂ ಬಳಕೆ ಆರೋಪ:

ಈ ಶಾಲೆಯಲ್ಲಿ ಹೊಸದಾಗಿ ಮೂರು ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಅಗತ್ಯವಿರುವ ಜಲ್ಲಿ, ಇಟ್ಟಿಗೆ, ಮರಳು ಮುಂತಾದವುಗಳನ್ನು ಶಾಲೆ ಆವರಣದಲ್ಲಿ ಶೇಖರಣೆ ಮಾಡಲಾಗಿತ್ತು. ಕಟ್ಟಡ ನಿರ್ಮಾಣದ ಕೆಲಸದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗು ತ್ತಿದೆಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಲೇಜಿಗೆ ಚಕ್ಕರ್, ಟ್ರೀ ಪಾರ್ಕ್'ನಲ್ಲಿ ಹಾಜರ್; ಇಲ್ಲಿ ಪ್ರೇಮಿಗಳದ್ದೇ ದರ್ಬಾರ್!

click me!