ಹಾವೇರಿ: ಹಿಂದೂ ಕಾರ್ಯಕರ್ತರ ಹತ್ಯೆಗೆ ರಾಣೆಬೆನ್ನೂರಲ್ಲಿ ಭುಗಿಲೆದ್ದ ಆಕ್ರೋಶ

By Girish Goudar  |  First Published Aug 2, 2022, 9:55 PM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಸೇರಿದಂತೆ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಹಾವೇರಿ ಜಿಲ್ಲೆ ರಾಣಿಬೆನ್ನೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. 


ಹಾವೇರಿ(ಆ.02):  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಸೇರಿದಂತೆ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಹಾವೇರಿ ಜಿಲ್ಲೆ ರಾಣಿಬೆನ್ನೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ರಾಣೆಬೆನ್ನೂರು ನಗರ  ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದರೂ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಆದರೆ ಪ್ರತಿಭಟನೆ ಆರಂಭದ ಸಮಯದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದರು.

ಪ್ರವೀಣ್ ಹತ್ಯೆ ಖಂಡಿಸಿ ಆರೋಪಿಗಳ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಪಿಎಫ್ ಐ ,ಎಸ್ ಡಿಪಿಐ ,ಬ್ಯಾನ್ ಮಾಡುವಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು.  

Latest Videos

undefined

ಹಾವೇರಿ: ಹಬ್ಬದ ಸಂಭ್ರಮದಲ್ಲಿ ಜವರಾಯನ ಅಟ್ಟಹಾಸ, ಶೌಚಾಲಯದ ಗುಂಡಿಯಲ್ಲಿ ಬಿದ್ದು ಬಾಲಕ ಸಾವು

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರ್ ಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಲಿದರು.ರ್ಯಾಲಿಯಲ್ಲಿ ಶಾಸಕ ಅರುಣ್ ಕುಮಾರ್, ಬಿಜೆಪಿ ಮುಖಂಡ ಪ್ರಕಾಶ್ ಬುರುಡಿಕಟ್ಟಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. ರಾಣೆಬೆನ್ನೂರಿನ ಬಸ್ ನಿಲ್ದಾಣದ ಬಳಿ ಮುಖ್ಯ ರಸ್ತೆ ತಡೆದು ಪಿ.ಎಫ್ ಐ , ಎಸ್ ಡಿ‌ಪಿ ಐ ಸಂಘಟನೆಗಳ ಪ್ರತಿಕ್ರತಿ ಧಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
 

click me!