Latest Videos

ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ತಲುಪಲಿಸಿ: ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ವಿ.ವೆಂಕಟೇಶನ್

By Suvarna NewsFirst Published Jun 15, 2024, 11:44 PM IST
Highlights

ಸಫಾಯಿ ಕರ್ಮಚಾರಿಗಳಿಗೆ ನ್ಯಾಯಯುತವಾಗಿ ಸಿಗಬೇಕಾಗ ಸರಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಕೆಲಸವಾಗಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ಹೇಳಿದರು

ವರದಿ:- ಮಲ್ಲಿಕಾರ್ಜುನ ಹೊಸಮನಿ

ಬಾಗಲಕೋಟೆ (ಜೂ.15): ಸಫಾಯಿ ಕರ್ಮಚಾರಿಗಳಿಗೆ ನ್ಯಾಯಯುತವಾಗಿ ಸಿಗಬೇಕಾಗ ಸರಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಕೆಲಸವಾಗಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ಹೇಳಿದರು.

ಅವರು ಬಾಗಲಕೋಟೆ   ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಸಫಾಯಿ ಕರ್ಮಚಾರಿ ಮತ್ತು ಸಂಘಟನೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪೌರಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಪೂರೈಸುವುದು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಕರ್ತವ್ಯವಾಗಿದೆ. ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಸರಕಾರದ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ವೇತನ ನೀಡುವ ಕೆಲಸವಾಗಬೇಕು ಎಂದರು.

ನಿಷೇಧಿಸಿದ್ರೂ ಅನಿಷ್ಟಪದ್ಧತಿ ಜೀವಂತ; ಮಲ ಹೊರಿಸಿದರೆ ಮುಲಾಜಿಲ್ಲದೆ ಕ್ರಮ: ಸಿಎಂ

 ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸಾಮೂಹಿತ ಶೌಚಾಲಯದ ಸ್ಥಿತಿಗತಿಗಳ ಬಗ್ಗೆ ಪ್ರಶ್ನಿಸಿದ ಅವರು ಜಮಖಂಡಿ ಭಾಗದಲ್ಲಿ ಡಿ ಗ್ರೂಪ್ ನೌಕರರ ಉಪಯೋಗಿಸಿ ಸಾಮೂಹಿಕ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಇದ್ದಲ್ಲಿ ಜಟ್ಟಿಂಗ್ ಮಷೀನ್ ಉಪಯೋಗಿಸಲಾಗುವುದೆಂದು ಪೌರಾಯುಕ್ತೆ ಲಕ್ಷ್ಮೀ ಅಸ್ಟಗಿ ಸಭೆಗೆ ತಿಳಿಸಿದರು.

ಪೌರ ಕಾರ್ಮಿಕರಿಗೆ ಮನೆ; ರಾಷ್ಟ್ರೀಯ ಅಧ್ಯಕ್ಷರ ಭರವಸೆ

ನಗರಸಭೆಯಲ್ಲಿ ಖಾಯಂಗೊಂಡ ಕೆಲ ಸಿಬ್ಬಂದಿಗಳಿಗೆ ಮನೆ ಇಲ್ಲದ್ದನ್ನು ಗಮನಿಸಿದ ಅಧ್ಯಕ್ಷರು ಮುಂಬರುವ ದಿನಗಳಲ್ಲಿ ನಿವೇಶನ ರಹಿತ, ನಿವೇಶನ ಸಹಿತ ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡಲು ಆಯುಕ್ತರಿಗೆ ನಿವೇಶನ ಗುರುತಿಸಲು ಸೂಚಿಸಿದರು. ಪ್ರತಿ ಗ್ರಾಮ ಪಂಚಾಯತಿಯಲ್ಲಿ 5 ಜನ ಸಿಬ್ಬಂದಿಗಳಿರುವುದು ಸಾಮಾನ್ಯ ಜನಸಂಖ್ಯೆ ಹೆಚ್ಚಾಗಿರುವ ಗ್ರಾ.ಪಂಗಳಿಗೆ ಹೆಚ್ಚುವರಿಯಾಗಿ ಹೊರಗುತ್ತಿಗೆ ಆಧಾರ ಮೇಲೆ ಸಿಬ್ಬಂದಿ ನೇಮಿಸಿಕೊಳ್ಳಲು ಹೇಳಿದರು. ಪ್ರತಿ ಕಾರ್ಮಿಕರ ಆರೋಗ್ಯಕ್ಕೆ ಹೆಚ್ಚಿನ ನಿಗಾ ಇಡುವದಲ್ಲದೇ ವಿಮಾ ಯೋಜನೆ, ಸುರಕ್ಷತಾ ಪರಿಕರಣಗಳನ್ನು ಒದಗಿಸಬೇಕು ಎಂದರು.

ಸೀಮಿಕೇರಿ, ಮುರನಾಳ ಹಾಗೂ ಯಡಹಳ್ಳಿ ಸಿಬ್ಬಂದಿಗಳನ್ನು ಮಾತನಡಿದ ಅವರು ಕಸ ವಿಲೇವಾರಿ ವಾಹನ ಮಹಿಳಾ ಚಾಲಕಿಗಳಿಗೆ ವಿಮೆ ಪಾಲಸಿ ಬಗ್ಗೆ ಖಾಯಂ ಗೊಳಿಸುವದರ ಬಗ್ಗೆ ತಿಳಿಸಿದರು. 1997 ರಲ್ಲಿ ಗುರುತಿಸಲಾದ ಸಿಬ್ಬಂದಿಗಳನ್ನು ಮಾತ್ರ ಖಾಯಂಗೆ ಪರಿಗಣಿಸಲಾಗುತ್ತಿದೆ. ಪ್ರಚಲಿತವಾಗಿ ಕೆಲಸಕ್ಕೆ ಸೇರಿದ ಪೌರಕಾರ್ಮಿಕರ ಖಾಯಂಗೆ ಸರಕಾರ ನಿಯಮಗಳು ಬಂದಿರುವದಿಲ್ಲ. ಪ್ರತಿ ಪೌರಕಾರ್ಮಿಕರಿಗೆ ನಿವೇಶನ ಮಾಡಿಕೊಳ್ಳಲು 7,50,000 ರೂ.ಗಳನ್ನು ಕೊಡಲಾಗುತ್ತಿದೆ. ಪ್ರತಿ ನಗರ ಹಾಗೂ ಗ್ರಾಮೀಣ ಸಂಸ್ಥೆಗಳು ಪ್ರತಿ ಪೌರಕಾರ್ಮಿಕರ ವೇತನ, ವಿಮೆ, ಇಎಸ್‍ಐ, ಪಿಎಫ್‍ಗಳ ಬಗ್ಗೆ ಸಮಗ್ರ ವಿವರಣೆ ನೀಡಲು ಸೂಚಿಸಿದರು.

ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿಗಳಿಗೆ ಶೌಚಾಲವುಳ್ಳ ವಿಶ್ರಾಂತಿ ಕೊಠಡಿ ಒದಗಿಸಬೇಕು. ನಿಯಮಿತವಾಗಿ ಮಾಸಿಕ ವೇತನ ಆಗದಿರುವ ಬಗ್ಗೆ ತಿಳಿದು ಅಲ್ಲಿನ ಅಧಿಕಾರಿಗಳಿಗೆ ಅನುದಾನ ಪಡೆದುಕೊಂಡು ವೇತನ ಪಾವತಿಗೆ ಕ್ರಮವಹಿಸಲು ತಿಳಿಸಿದರು. ಸಫಾಯಿ ಕರ್ಮಚಾರಿಗಳಿಗೆ ತೊಂದರೆ, ಕಿರುಕುಳ ಆದರೆ ಆಯೋಗಕ್ಕೆ ದೂರು ಸಲ್ಲಿಸಲು ಬಯಸಿದಲ್ಲಿ ದೂಸಂ.01124648924ಗೆ ಕರೆ ಮಾಡಿ ತಿಳಿಸಬಹುದು ಇಲ್ಲವೇ ಆಯೋಗದ ವೆಬ್‍ಸೈಟ್ ಮೂಲಕ ದೂರು ದಾಖಲಿಸಬಹುದಾಗಿದೆ ಎಂದರು.

ಪೌರ ಕಾರ್ಮಿಕರ ಸೇವೆ ತಕ್ಷಣ ಕಾಯಂಗೊಳಿಸಿ: ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕ ಮಾಹಿತಿಯನ್ನು ಸಭೆಗೆ ತಿಳಿಸಿದರೆ, ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಾಹಿತಿಯನ್ನು ಜಿ.ಪಂ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿ.ಪಂ ಸಿಇಓ ಶಶಿಧರ‌ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ನಿರ್ದೇಶಕ ಜಗದೀಶ ಹಿರೇಮನಿ, ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಸಿಂಗ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!