Bengaluru: ಹೆಬ್ಬಾಳ ಮೇಲ್ಸೇತುವೆ ಮೇಲೆ ಬೆಳಗ್ಗೆ ಸರಕು ಸಾಗಿಸುವ ವಾಹನಗಳ ನಿಷೇಧ

By Govindaraj S  |  First Published Nov 19, 2022, 7:42 AM IST

ಸಂಚಾರ ದಟ್ಟಣೆ ಹಿನ್ನಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಬೆಳಗ್ಗೆ ಎರಡು ಗಂಟೆಗಳ ಕಾಲ ಸರಕು ಸಾಗಾಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. 


ಬೆಂಗಳೂರು (ನ.19): ಸಂಚಾರ ದಟ್ಟಣೆ ಹಿನ್ನಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಬೆಳಗ್ಗೆ ಎರಡು ಗಂಟೆಗಳ ಕಾಲ ಸರಕು ಸಾಗಾಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಈ ವ್ಯವಸ್ಥೆಯು ಶನಿವಾರದಿಂದಲೇ ಜಾರಿಗೆ ಬರಲಿದ್ದು, ಪ್ರತಿದಿನ ಬೆಳಗ್ಗೆ 8.30ರಿಂದ 10.30ರವರೆಗೆ ಸರಕು ಸಾಗಾಣೆ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. 

ಈ ಅವಧಿಯಲ್ಲಿನ ಸಂಚಾರ ವ್ಯವಸ್ಥೆಯ ಸಾಧಕ ಬಾಧಕಗಳನ್ನು ಪರಾಮರ್ಶಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ನಗರ ವಿಶೇಷ ಪೊಲೀಸ್‌ ಆಯುಕ್ತ (ಸಂಚಾರ) ಡಾ. ಎಂ.ಎ.ಸಲೀಂ ತಿಳಿಸಿದ್ದಾರೆ. ಶುಕ್ರವಾರ ಸಲೀಂ ಅವರು ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಗರದ ಹೆಬ್ಬಾಳ, ಯಲಹಂಕ ಹಾಗೂ ಚಿಕ್ಕಜಾಲ ಸೇರಿದಂತೆ ಈಶಾನ್ಯ ಪ್ರದೇಶದಲ್ಲಿ ಕೈಗಾರಿಕೆಗಳು ಮತ್ತು ವಾಣಿಜ್ಯೋದ್ಯಮಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. 

Tap to resize

Latest Videos

Namma Metro: ಮೆಟ್ರೋ ಮೂರನೇ ಎ ಹಂತಕ್ಕೆ ಸರ್ಕಾರ ಅನುಮತಿ

ಅದಕ್ಕೆ ಪೂರಕವಾಗಿ ಜನಸಂಖ್ಯೆಯೂ ಏರು ಮುಖವಾಗಿದೆ. ಇದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಾವಿರಾರು ಜನರು ಸಂಚರಿಸುತ್ತಾರೆ. ಅಲ್ಲದೆ ಆಗಮಿಸುವ ಗಣ್ಯರು ಕೂಡ ಇದೇ ಮಾರ್ಗದಲ್ಲಿ ಸಂಚರಿಸುವುದರಿಂದ ದೈನಂದಿನ ವಾಹನಗಳಿಗೆ ಸುಗಮ ಸಂಚಾರ ಕಲ್ಪಿಸುವುದು ಪೊಲೀಸರಿಗೆ ಸವಾಲಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ-7ರಲ್ಲಿ ಪ್ರತಿದಿನ ಲಕ್ಷಾಂತರ ಸರಕು ಸಾರಿಗೆ ವಾಹನಗಳು ಸಂಚರಿಸುತ್ತಿವೆ. 

ವರುಣಾ ಕ್ಷೇತ್ರದತ್ತ ಸಿದ್ದರಾಮಯ್ಯ ಒಲವು?: ಕೋಲಾರದಲ್ಲಿ ಒಳೇಟಿನ ಭೀತಿ

ಹೀಗಾಗಿ ಪಿಕ್‌ ಅವರ್‌ನಲ್ಲಿ ಅವುಗಳ ಸಂಚಾರದಿಂದ ವಾಹನ ದಟ್ಟಣೆಗೂ ಕಾರಣವಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-7ರ ಸಾದಹಳ್ಳಿ ಜಂಕ್ಷನ್‌ನಿಂದ ಹೆಬ್ಬಾಳ ಫ್ಲೈಓವರ್‌ ವರೆಗೆ ಪ್ರತಿದಿನ ಬೆಳಗ್ಗೆ 8.30ರಿಂದ 10.30ರವರೆಗೆ ಸರಕು ಸಾರಿಗೆ ವಾಹನಗಳನ್ನು ನಿಷೇಧಿಸಲಾಗಿದ್ದು, ಪ್ರಾಯೋಗಿಕ ವ್ಯವಸ್ಥೆ ಆಗಿರುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಸಲೀಂ ಮನವಿ ಮಾಡಿದ್ದಾರೆ.

click me!