ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧೀಸಿದೆ. ತಂಬಾಕು ಉತ್ಪನ್ನಗಳನ್ನು ಮಕ್ಕಳಿಗೆ ಮಾರಾಟ ಮಾಡುವುದು ನಿಷಿದ್ಧವಾಗಿದೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ ...
ಧಾರವಾಡ (ಸೆ.14) : ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003(cigarrates And Other Tobacco Products Act-2003 COPTA) ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧೀಸಿದೆ. ತಂಬಾಕು ಉತ್ಪನ್ನಗಳನ್ನು ಮಕ್ಕಳಿಗೆ ಮಾರಾಟ ಮಾಡುವುದು ನಿಷಿದ್ಧವಾಗಿದೆ. ಈ ಕುರಿತು ವ್ಯಾಪಕ ಜನಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಆಂದೋಲನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
World No Tobacco Day: ತಂಬಾಕಿನಿಂದ ಪ್ರತಿ ವರ್ಷ ಸಾಯುತ್ತಿದ್ದಾರೆ 80 ಲಕ್ಷ ಮಂದಿ !
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ತಂಬಾಕು ನಿಯಂತ್ರಣ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಆರೋಗ್ಯ, ಸಾಮಾಜಿಕ, ಸರ್ಕಾರೇತರ ಅಭಿವೃದ್ಧಿ ಸಂಸ್ಥೆಗಳ ಕಾರ್ಯಕರ್ತರು ಶಾಲಾ ಶಿಕ್ಷಕರು ಮತ್ತು ಅನುಷ್ಠಾನ ಅಧಿಕಾರಿಗಳಿಗೆ ನಿರಂತರ ತರಬೇತಿ ನೀಡಬೇಕು. ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋಟ್ಟಾ-ಕಾಯ್ದೆ ಕುರಿತು ಅರಿವು ಮೂಡಿಸಬೇಕು. ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಆಂದೋಲನ ಕೈಗೊಂಡು ವ್ಯಾಪಕ ತಿಳುವಳಿಕೆ ಮೂಡಿಸುವ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದರು.
ಕೋಟ್ಟಾ ಕಾಯ್ದೆ-2003 ರ ಸೆಕ್ಷನ್-4ರಡಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸೆಕ್ಷನ್ 5 ರ ಪ್ರಕಾರ ತಂಬಾಕು ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧಿಸಲಾಗಿದೆ. ಸೆಕ್ಷನ್6-ಎ ಪ್ರಕಾರ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿರ್ಬಂಧವಾಗಿದೆ. ಸೆಕ್ಷನ್6-ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಆವರಣ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ತಂಬಾಕು ಉತ್ಪನ್ನಗಳ ಮೇಲೆ ನಿಗದಿತ ಎಚ್ಚರಿಕೆ ಸೂಚಿಸುವ ಲೇಬರ್‍ಗಳಿರಬೇಕು ಎಂದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮಾತನಾಡಿ, ಜಿಲ್ಲೆಯಾದ್ಯಂತ ಕಳೆದ ಎಪ್ರೀಲ್‍ನಿಂದ ಆಗಸ್ಟ್ ಅಂತ್ಯದವರೆಗೆ ಆರೋಗ್ಯ ಇಲಾಖೆಯು 519 ಪ್ರಕರಣಗಳನ್ನು ದಾಖಲಿಸಿ, ರೂ.53,940 ದಂಡ ಸಂಗ್ರಹಿಸಲಾಗಿದೆ. ಮಹಾನಗರ ಪೊಲೀಸ್ ಆಯುಕ್ತಾಲಯವು 514 ಪ್ರಕರಣಗಳನ್ನು ದಾಖಲಿಸಿ, ರೂ.90,790 ದಂಡ ಸಂಗ್ರಹಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಯಲ್ಲಿ 833 ಪ್ರಕರಣಗಳನ್ನು ದಾಖಲಿಸಿ, 84,900 ದಂಡ ಆಕರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಇ- ತಂಬಾಕು ನಿಷೇಧಕ್ಕೆ ಕೇಂದ್ರದಿಂದ ಸುಗ್ರಿವಾಜ್ಞೆ?
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಮಹಾನಗರಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ಡಾ.ತನುಜಾ ನಾಯಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೆಶಕ ಎಸ್.ಎಸ್.ಕೆಳದಿಮಠ ಮತ್ತಿತರರು ಇದ್ದರು.