ಎರಡು ಕುಟುಂಬದ ನಡುವಿನ ಆಸ್ತಿ ವಿವಾದ ಭೀಕರ ಕೊಲೆಯಲ್ಲಿ ಅಂತ್ಯ

By Kannadaprabha News  |  First Published Mar 6, 2020, 11:05 AM IST

ಎರಡು ಕುಟುಂಬಗಳ ನಡುವಿನ ಆಸ್ತಿ ವಿವಾದವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಅಲ್ಲದೇ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 


ಶಿವಮೊಗ್ಗ [ಮಾ.06]: ಆಸ್ತಿ ವಿವಾದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಭದ್ರಾಪುರದಲ್ಲಿ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆದಿದ್ದು, ಓರ್ವ ಸಾವೀಡಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  

Tap to resize

Latest Videos

ಎರಡು ಕುಟುಂಬಗಳ ನಡುವೆ ಆಸ್ತಿ ಗಲಾಟೆ ನಡೆದಿದ್ದು, ಈ ವೇಳೆ ಕರಿಯಪ್ಪ [65] ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. 

ಗೆಳೆಯನ ಮಂಚಕ್ಕೆ ದೂಡಿದ ಪತಿ, ಗೃಹಿಣಿ ಆತ್ಮಹತ್ಯೆ...

ಕರಿಯಪ್ಪ ಅವರ ಮಕ್ಕಳಾದ ನಾಗರಾಜ್ ಹಾಗೂ ಮನೋಹರ್ ಎಂಬುವವರ ಮೇಲೂ ಹಲ್ಲೆ ನಡೆದಿದ್ದು ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸುರೇಶ್ ಎಂಬಾತ ಹಾಗೂ ಆತನ ಬಂಧುಗಳು ಸೇರಿ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 

click me!