ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿ ಘಟನೆ ನಡೆದಿದೆ.
ಟಿ. ನರಸೀಪುರ (ಏ.06): ಪಟ್ಟಣದಲ್ಲಿ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳೆಯರನ್ನು ರಕ್ಷಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಪಟ್ಟಣದ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಬೆಂಗಳೂರು ಹಾಗೂ ಯಳಂದೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಆಟೋದಲ್ಲಿ ಮಹಿಳೆ ಪಕ್ಕ ಕೂತು ಹಸ್ತಮೈಥುನ ಮಾಡ್ಕೊಂಡ! ...
ಅಲ್ಲದೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮಾಲೀಕ ಮಹದೇವಯ್ಯ ಹಾಗೂ ರೂಂ ಬಾಯ… ಮಂಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಸಿದ್ದರಾಜು ಮತ್ತು ಮುರುಗ ಎಂಬವರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂಜನಗೂಡು ಡಿವೈಎಸ್ಪಿ ಗೋವಿಂದರಾಜು, ಡಿಸಿಐಬಿ ಇನ್‌ಸ್ಪೆಕ್ಟರ್ ಜೀವನ್, ಸಿಪಿಐ ಕೃಷ್ಣಪ್ಪ ಹಾಗೂ ಎಸ್‌ಐ ಮಂಜು ದಾಳಿಯ ನೇತೃತ್ವ ವಹಿಸಿದ್ದರು.