ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆತ್ತಲೆಗೊಳಿಸಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆಂಬ ಆರೋಪದಲ್ಲಿ ಎಸಿಪಿ ಚಂದನ್ ವಿರುದ್ಧ ಪ್ರತಿಭಟನೆಗೆ ಮುಂದಾದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು (ಜು.31): ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆನ್ನಲಾದ ಆರೋಪದಲ್ಲಿ ಎಸಿಪಿ ಚಂದನ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪುನಃ ಎಸಿಪಿ ವಿರುದ್ಧ ಪ್ರತಿಭಟನೆಗೆ ಬಂದ ಪುನೀತ್ ಕೆರೆಹಳ್ಳಿ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ಪುನಃ ವಶಕ್ಕೆ ಪಡೆದಿದ್ದಾರೆ.
ರಾಜಸ್ಥಾನದಿಂದ ಅಕ್ರಮವಾಗಿ ಮಾಂಸ ಸಾಗಣೆ ಮಾಡಲಾಗುತ್ತಿದೆ ಎಂಬ ಗುಮಾನಿಯ ಮೇಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತನ್ನ ಸಂಗಡಿಗರೊಂದಿಗೆ ತೆರಳಿ ದಾಳಿ ಮಾಡಿದ್ದರು. ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದ ವೇಳೆ ಎಸಿಬಿ ಚಂದನ್ ಅವರು ಪುನೀತ್‌ನನ್ನು ಬೆತ್ತಲೆಗೊಳಿಸಿ ಭೀಕರವಾಗಿ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಎಸಿಪಿ ಚಂದನ್ ಭೇಟಿ ಮಾಡಲು ಆಗಮಿಸಿದ ಪುನೀತ್ ಕೆರೆಹಳ್ಳಿ ಹಾಗೂ ಬೆಂಬಲಿಗರನ್ನು ಪುನಃ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್ ಸಿಂಹನಿಗೆ ಈವರೆಗೆ ಎಸಿಪಿ ಚಂದನ್ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿಲ್ಲ. ಈವರೆಗೆ ರಸ್ತೆಯಲ್ಲಿಯೇ ನಿಂತಿದ್ದಾರೆ.
ಕಣ್ಣಮುಂದೆ ಹೆಂಡ್ತಿ, ಮೊಮ್ಮಗ ಕೊಚ್ಚಿಕೊಂಡು ಹೋಗ್ತಿದ್ದರೂ ರಕ್ಷಿಸೋಕೆ ಆಗಲಿಲ್ಲ; ವಯನಾಡ್‌ನಲ್ಲಿ ಕನ್ನಡಿಗನ ಅಳಲು
ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್:
ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ 'ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಪೋಸ್ಟ್ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಎಸಿಪಿ ಚಂದನ್ ಅವರನ್ನು ಭೇಟಿಯಾಗಲು ಬಂದಿದ್ದಾರೆ. ಆದರೆ, ಈ ವೇಳೆ ಎಸಿಪಿ ಚಂದನ್ ಭೇಟಿಗೆ ಅವಕಾಶ ನೀಡದೇ ಅವರನ್ನು ರಸ್ತೆಯಲ್ಲಿಯೇ ನಿಲ್ಲಿಸಲಾಗಿದೆ.
ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು. pic.twitter.com/ThZwMlW8oN
— Prathap Simha (@mepratap)ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು
ಪುನೀತ್ ಕೆರೆಹಳ್ಳಿಯನ್ನು ಬೆತ್ತಲೆಗೊಳಿಸಿ ವಿಡಿಯೋ ಸೆರೆ:
ರಾಜಸ್ಥಾನದುಂದ ಬೆಂಗಳೂರಿಗೆ ರೈಲಿನಲ್ಲಿ ಅಕ್ರಮವಾಗಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಗುಮಾನಿ ಮೇಲೆ ಮುಸ್ಲಿಂ ವ್ಯಾಪಾರಿಗಳ ಬಾಕ್ಸ್‌ಗಳನ್ನು ಕೊಂಡೊಯ್ಯಲು ಬಿಡದೇ ಅವುಗಳನ್ನು ತೆರೆದು ಪ್ರತಿಭಟನೆ ಮಾಡಿದ್ದ ಪುನೀತ್ ಕೆರೆಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಪುನೀತ್ ಕೆರೆಹಳ್ಳಿ ಬೆಂಬಲಿಗರ ಮೇಲೆ ರಕ್ತ ಬರುವಂತೆ ಹಲ್ಲೆಯನ್ನೂ ಮಾಡಿದ್ದರು. ಇನ್ನು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ಆತನನ್ನು ಸೆಲ್‌ನಲ್ಲಿ ಕುಡಿಹಾಕಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿ, ಅದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪ್ರತಿಭಟನೆಗೆ ಬಂದಾಗ ಪುನಃ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ.