ರಾಮನಗರದಲ್ಲಿ ಹೆಚ್ಚಿದ ಕಾವೇರಿ ಕಿಚ್ಚು: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಪ್ರತಿಭಟನೆ

By Girish Goudar  |  First Published Sep 26, 2023, 7:59 AM IST

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಮೌನಾಚರಣೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು, ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು 


ರಾಮನಗರ(ಸೆ.26):  ಕಾವೇರಿ ನೀರಿಗಾಗಿ ಇಂದು ಬೆಂಗಳೂರು ಜೊತೆಗೆ ರಾಮನಗರದಲ್ಲಿಯೂ ಕೂಡ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು(ಮಂಗಳವಾರ) ಬೆಳ್ಳಂಬೆಳಿಗ್ಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. 

ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. 

Tap to resize

Latest Videos

ಕಾವೇರಿಗಾಗಿ ಬಂದ್‌: ರಾಜ್ಯ ಹಿತದ ಹೋರಾಟಕ್ಕೆ ಸಹಕಾರ, ಡಿಕೆಶಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಮೌನಾಚರಣೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು, ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

click me!