ಚಿಕ್ಕಮಗಳೂರು: ಹದಗೆಟ್ಟ ಬನ್ನೂರು ರಸ್ತೆ: ಬಾಳೆಗಿಡ ನೆಟ್ಟು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

By Girish Goudar  |  First Published Aug 30, 2022, 4:53 PM IST

ಬಾಳೆಹೊನ್ನೂರು ಸಮೀಪದ ಬನ್ನೂರು ರಸ್ತೆ ಹೊಂಡ ಗುಂಡಿಗಳಿಂದ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯರಸ್ತೆಗೆ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಆ.30):  ಪ್ರವಾಸಿ ಸ್ಥಳ, ಧಾರ್ಮಿಕ ಕ್ಷೇತ್ರಕ್ಕೆ ತೆರಳುವ ರಸ್ತೆಯ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಪ್ರಯಾಣಿಕರು ಯಮಯಾತನೆಯಲ್ಲಿ ಸಂಚಾರಿಸುವ ದುಸ್ಥಿತಿ ಬಾಳೆಹೊನ್ನೂರಿನಿಂದ ಕಳಸ-ಹೊರನಾಡು-ಕೊಟ್ಟಿಗೆಹಾರ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಬನ್ನೂರು ಸಮೀಪದಲ್ಲಿ ಎದುರಾಗಿದೆ. 

Tap to resize

Latest Videos

ಬನ್ನೂರು ರಸ್ತೆ ಅವ್ಯವಸ್ಥೆ: ಬಾಳೆಗಿಡ ನೆಟ್ಟು ಪ್ರತಿಭಟನೆ

ಬಾಳೆಹೊನ್ನೂರಿನಿಂದ ಕಳಸ-ಹೊರನಾಡು-ಕೊಟ್ಟಿಗೆಹಾರ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಬನ್ನೂರು ಸಮೀಪದಲ್ಲಿ ತೀವ್ರ ಹದಗೆಟ್ಟಿರುವ ದುರಸ್ಥಿಪಡಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಬಾಳೆಗಿಡ ನೆಟ್ಟು ಪ್ರತಿಭಟಿಸಿದ್ದಾರೆ. ಬಾಳೆಹೊನ್ನೂರು ಸಮೀಪದ ಬನ್ನೂರು ರಸ್ತೆ ಹೊಂಡ ಗುಂಡಿಗಳಿಂದ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯರಸ್ತೆಗೆ ಬಾಳೆಗಿಡ ನೆಟ್ಟು ಪ್ರತಿಭಟಿಸಿದರು. ಭಾಸ್ಕರ್ ವೆನಿಲ್ಲಾ, ಉಮೇಶ್ ಕಲ್ಮಕ್ಕಿ, ಟಿ.ಎಂ.ನಾಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸ್ಥಳೀಯ ಶಾಸಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಚಿಕ್ಕಮಗಳೂರು: ಸಿಬ್ಬಂದಿ ಇಲ್ಲದೇ ಜನೌಷಧಿ ಕೇಂದ್ರಕ್ಕೆ ಬೀಗ

ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಕಿಡಿ 

ಪ್ರತಿಭಟನೆಯಲ್ಲಿ ಮಾತಾಡಿದ ಬಿಜೆಪಿ ಮುಖಂಡ ಉಮೇಶ್ ಕಲ್ಮಕ್ಕಿ ಬನ್ನೂರು ಗ್ರಾಮದಲ್ಲಿರುವ ಮುಖ್ಯರಸ್ತೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಹೊರನಾಡು, ಬಾಳೆಹೊನ್ನೂರು, ಕಳಸ, ಧರ್ಮಸ್ಥಳ, ಹರಿಹರಪುರ, ಶಕಟಪುರ, ಶೃಂಗೇರಿ, ಬಸ್ತಿಮಠ ಸೇರಿದಂತೆ ಹಲವಾರು ಕಡೆಗಳಿಗೆ ಸಂಪರ್ಕ ಕಲ್ಪಿಸಲಿದೆ. ಕಳೆದ ಎರಡು ವರ್ಷಗಳಿಂದ ಮುಖ್ಯರಸ್ತೆಯು ಹಲವು ಕಿಲೋ ಮೀಟರ್ ದೂರ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು, ಸ್ಥಳೀಯರು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಆದರೆ ಕ್ಷೇತ್ರದ ಶಾಸಕರು ಗುಂಡಿ ಬಿದ್ದ ರಸ್ತೆಯನ್ನು ಕನಿಷ್ಟ ಪಕ್ಷ ಮುಚ್ಚುವ ಕಾರ್ಯ ಮಾಡುತ್ತಿಲ್ಲ. ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣ ಮಾಡಲು ಸಾಧ್ಯವಾಗದೆ ಇರುವುದು ವಿಶಾದನೀಯವಾಗಿದೆ ಎಂದರು. 

ಕ್ಷೇತ್ರದಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಶಾಸಕರಿಗೆ ಯಾವುದೇ ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲು ಸಾಧ್ಯವಾಗಿಲ್ಲ. ಕನಿಷ್ಟ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಲಾಗುತ್ತಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವಲ್ಲಿ ಶಾಸಕರು ವಿಫಲರಾಗುತ್ತಿದ್ದಾರೆ. ಅಧಿಕಾರಿಗಳು ಶಾಸಕರನ್ನು ಮಾತನ್ನು ಕೇಳುತ್ತಿಲ್ಲ ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಶಾಸಕರಿಗೆ ಸಾಧ್ಯವಾಗುತ್ತಿಲ್ಲ. ಶಾಸಕರಿಗೆ ಇರುವ ಕನಿಷ್ಟ ಅವಧಿಯಲ್ಲಾದರೂ ಕ್ಷೇತ್ರದ ವಿವಿಧೆಡೆ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದರು. ಬಿಜೆಪಿ ಮುಖಂಡ ಟಿ.ಎಂ.ನಾಗೇಶ್, ಬನ್ನೂರು ಗ್ರಾಪಂ ಅಧ್ಯಕ್ಷೆ ಕೆ.ಸಿ.ಪವಿತ್ರಾ ಮತ್ತಿತರರು ಇದ್ದರು.
 

click me!