ಹುಬ್ಬಳ್ಳಿ (ಜೂನ್ 30): ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭಕ್ಕೆ ಮುನ್ನವೇ ಪಾಲಿಕೆ ಆವರಣದಲ್ಲಿ ಪ್ರತ್ಯೇಕ ಪಾಲಿಕೆ ಧ್ವನಿ ಮೊಳಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಈಗ ಮತ್ತೆ ಬಲ ಬಂದಿದೆ.
ಹಲವು ದಿನಗಳಿಂದ ಪ್ರತ್ಯೇಕ ಪಾಲಿಕೆ ಹೋರಾಟದ ಧ್ವನಿ ಕೇಳಿ ಬರುತ್ತಿತ್ತು. ಇದರ ಮುಂದುವರಿದ ಭಾಗವಾಗಿ ಧಾರವಾಡದ ಹೋರಾಟಗಾರರ ಒಕ್ಕೂಟ ಇಂದು ಹುಬ್ಬಳ್ಳಿಯ ಪಾಲಿಕೆ ಆವರಣದಲ್ಲಿ ಎಚ್.ಡಿ.ಎಂ.ಸಿ ಸಾಕು ಡಿ.ಎಂ.ಸಿ ಬೇಕು ಎಂಬುವ ಘೋಷಣೆ ಕೂಗುವ ಮೂಲಕ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿದರು.
ಇನ್ಮುಂದೆ ಹುಬ್ಬಳ್ಳಿ-ಧಾರವಾಡದಲ್ಲಿ ಜಗಮಗಲಿಸಲಿದೆ ಡಿಜಿಟಲ್ ಜಾಹೀರಾತು..!
ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮನ್ಯ ಸಭೆ ನಡೆಯುತ್ತಿದೆ ಸಮಾನ್ಯ ಸಭೆಯ ವೇಳೆಗಮನ ಸೇಳೆಯಲು ಪ್ರತ್ಯೇಕ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬರುವ ಸಾದ್ಯತೆ ಇದೆ.
ಇನ್ನುಬ ಪಾಲಿಕೆಯ ಆವರಣದಲ್ಲಿ ಜಮಾವಣೆಗೊಂಡ ಹೋರಾಟಗಾರರು ವಿವಿಧ ಬೇಡಿಕೆಯ ನಾಮಫಲಕ ಹಿಡಿದುಕೊಂಡು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದ್ದು, ಮೊದಲ ಸಾಮಾನ್ಯ ಸಭೆಯಲ್ಲಿ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಉತ್ತರ ಬೇಕು ಎಂದು ಪ್ರತಿಭಟನಾನಿರತ ಹೋರಾಟಗಾರರು ಆಗ್ರಹಿಸಿದ್ದಾರೆ.
DAVANGERE ಸಿಟಿಯಲ್ಲಿ ಈಗ 24 ಗಂಟೆಯೂ ಸಿಸಿಟಿವಿ ಕಣ್ಗಾವಲು
ಮೊದಲ ಸಭೆಯಲ್ಲಿ ಬಂಪರ್ ಗಿಫ್ಟ್ ಕೊಟ್ಟ ಮೇಯರ್!: ಹುಬ್ಬಳ್ಳಿ ಧಾರವಾಡ ಮಹಾನಗರದ ಪ್ರತಿಯೊಂದು ವಾರ್ಡ್ ಗೆ 50 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೆ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಈರೇಶ ಅಂಚಟಗೇರಿ ಘೋಷಿಸಿದ್ದಾರೆ.
ಮೂರು ವರ್ಷದ ಬಳಿಕ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಮೊದಲ ಸಾಮನ್ಯ ಸಭೆಯಲ್ಲಿ ಇಂತಹದೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಸಾಮಾನ್ಯ ಸಭೆಯ ಮೊದಲು ಮಾತನಾಡಿದ ಅವರು, ಅವಳಿನಗರದ ಜ್ವಲಂತ ಸಮಸ್ಯೆಗಳಿಗೆ, ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸೋಣ. ಅಲ್ಲದೆ ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಒಳಚರಂಡಿ ಸೇರಿದಂತೆ ಜನರಿಗೆ ಅಗತ್ಯವಿರುವ ಕೆಲಸವನ್ನು ಮಾಡುವ ಮೂಲಕ ಪ್ರತಿಯೊಂದು ವಾರ್ಡ್ ಅಭಿವೃದ್ಧಿಗೆ ಶ್ರಮಿಸೋಣ ಎಂದು ಅವರು ಹೇಳಿದರು.
ಈಗಾಗಲೇ ಅಭಿವೃದ್ಧಿ ಕಾರ್ಯಗಳಿಗೆ ತಡೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ವಾರ್ಡ್ ಸದಸ್ಯರಿಗೂ ತಲಾ 50 ಲಕ್ಷ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡೋಣ ಎಂದ ಅವರು, ತಮ್ಮನ್ನು ಮೇಯರ್ ಆಗಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಅಂದ ಹಾಗೆ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಒಟ್ಟು 82 ವಾರ್ಡ್ ಗಳನ್ನು ಹೊಂದಿದ್ದು. ಕೋಟಿ ಅನುದಾನ ಬೇಕಾಗಲಿದೆ.