ಡಿಕೆಶಿ ಬಂಧನ: ಬಿಎಸ್‌ವೈ ಹುಟ್ಟೂರಲ್ಲೇ ಬಿಜೆಪಿ ವಿರುದ್ಧ ಪ್ರತಿಭಟನೆ

Published : Sep 07, 2019, 04:03 PM ISTUpdated : Sep 07, 2019, 04:08 PM IST
ಡಿಕೆಶಿ ಬಂಧನ: ಬಿಎಸ್‌ವೈ ಹುಟ್ಟೂರಲ್ಲೇ ಬಿಜೆಪಿ ವಿರುದ್ಧ ಪ್ರತಿಭಟನೆ

ಸಾರಾಂಶ

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವನ್ನು ವಿರೋಧಿಸಿ ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದೀಗ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆಯಲ್ಲೇ ಡಿಕೆಶಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಮೋದಿ,  ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ(ಸೆ.07): ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವನ್ನು ವಿರೋಧಿಸಿ ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದೀಗ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆಯಲ್ಲೇ ಡಿಕೆಶಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಎಸ್‌ವೈ ಹುಟ್ಟೂರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಡಿಕೆಶಿ ಬಂಧನ ಖಂಡಿಸಿ ಬಿಜೆಪಿ ವರಿಷ್ಠರ ವಿರುದ್ಧ ಪ್ರತಿಭಟನೆ ನಡೆಸಿದ ಜೆಡಿಎಸ್‌, ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ,  ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಇಡಿ, ಐಟಿಯನ್ನು ಬಳಸಿಕೊಂಡು ಸೇಡಿನ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.

ಡಿಕೆಶಿ ಬಂಧನದ ಹಿಂದೆ ರಾಜಕೀಯ ದುರುದ್ದೇಶ:

ರಾಜಕೀಯ ದುರುದ್ದೇಶದಿಂದ ಡಿ.ಕೆ.ಶಿವಕುಮಾರ್ ಅವ್ರನ್ನ ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡಬೇಕೆಂದು ಪ್ಪ್ರರತಿಭಟನಾಕಾರರು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗೆ ಡಿಕೆಶಿ ಸೆಳೆಯಲು ತಂತ್ರ : ಮಾಜಿ ಸಂಸದ ಧ್ರುವನಾರಾಯಣ್ ಆರೋಪ

PREV
click me!

Recommended Stories

ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್