ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಸಮಾನ ಅವಕಾಶ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Published : Jan 17, 2025, 08:03 PM IST
ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಸಮಾನ ಅವಕಾಶ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಸಾರಾಂಶ

ಜೀವನದ ಯಶಸ್ಸಿನಲ್ಲಿ ಶಿಕ್ಷಣವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ವ್ಯಕ್ತಿಯೊಬ್ಬ ಶಿಕ್ಷಣ ಪಡೆದಾಗ ಅವನ ಅಭಿವೃದ್ಧಿಯು ಉತ್ತಮವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. 

ವರದಿ: ನರಸಿಂಹ ಮೂರ್ತಿ ಕುಲಕರ್ಣಿ, ಬಳ್ಳಾರಿ

ಬಳ್ಳಾರಿ (ಜ.17): ಜೀವನದ ಯಶಸ್ಸಿನಲ್ಲಿ ಶಿಕ್ಷಣವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ವ್ಯಕ್ತಿಯೊಬ್ಬ ಶಿಕ್ಷಣ ಪಡೆದಾಗ ಅವನ ಅಭಿವೃದ್ಧಿಯು ಉತ್ತಮವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿನ ಎಸ್‌ಬಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ನಲ್ಲಿ ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬೃಂದಾ ಪಿಯು ಕಾಲೇಜು, ಬೃಂದಾ ಪದವಿ ಕಾಲೇಜು ಮತ್ತು ಸ್ಕಂದ ಇನ್‌ಸ್ಟಿಟ್ಯೂಷನ್ ಆಫ್ ನರ್ಸಿಂಗ್ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿ, ಕಾಲೇಜು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳು ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಪಕರು, ಆದ್ದರಿಂದ ಅವರ ಶಿಕ್ಷಣ ಮತ್ತು ಕಲ್ಯಾಣ ಮತ್ತು ಅವರಲ್ಲಿ ನೈತಿಕ ಗುಣಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕೆಂದರು. ಶಿಕ್ಷಣವು ನಮಗೆ ಆಲೋಚನೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ. ಶಿಕ್ಷಣವನ್ನು ಎಂದಿಗೂ ಕದಿಯಲಾಗುವುದಿಲ್ಲ, ಶಿಕ್ಷಣವು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಹೇಳಿದರು.

ವಿವೇಕಾನಂದರು ಸ್ಪೂರ್ತಿ: ಸ್ವಾಮಿ ವಿವೇಕಾನಂದರು ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ ಮಾನಸಿಕ ಬೆಳವಣಿಗೆಯನ್ನು ಅಭಿವೃದ್ಧಿಪಡಿಸುವ ಬುದ್ಧಿವಂತಿಕೆ ಅಭಿವೃದ್ಧಿಪಡಿಸಬೇಕು. ಮನುಷ್ಯನನ್ನು ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುವಂತೆ ಶಿಕ್ಷಣ ಮಾಡುತ್ತದೆ. ಎದ್ದೇಳಿ, ಎಚ್ಚರಗೊಳ್ಳಿ ಮತ್ತು ಗುರಿಯನ್ನು ಸಾಧಿಸುವವರೆಗೆ ನಿಲ್ಲಬೇಡಿ. ಎನ್ನುವ ವಿವೇಕಾನಂದರ ಮಾತು ಸಾರ್ವಕಾಲಿಕ. ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬ ಯುವಪೀಳಿಗೆ ನಡೆದು, ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಪ್ರತಿಯೊಂದು ಮೂಲೆಯೂ, ಪ್ರತಿ ತರಗತಿಯೂ ಮತ್ತು ಇಲ್ಲಿನ ಪ್ರತಿಯೊಂದು ಚಟುವಟಿಕೆಯೂ ನಿಮ್ಮ ಅಭಿವೃದ್ಧಿಗೆ ಮೀಸಲಾಗಿದೆ. ನೀವು ಪ್ರತಿದಿನ ಹೊಸ ಕಲಿಕೆಯೊಂದಿಗೆ ಪ್ರಾರಂಭಿಸಿ. ವೈಫಲ್ಯದ ಬಗ್ಗೆ ಎಂದಿಗೂ ಭಯಪಡಬೇಡಿ, ಏಕೆಂದರೆ ಈ ವೈಫಲ್ಯಗಳು ನಿಮ್ಮನ್ನು ಬಲಪಡಿಸುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕೆಚ್ಚಲು ಕೊಯ್ಯುವ ಚಿತ್ರವೇ ಕಾಂಗ್ರೆಸ್ ಪಕ್ಷದ ಚಿಹ್ನೆ ಮಾಡಿಕೊಳ್ಳುತ್ತಾರೆ: ಪ್ರತಾಪ್ ಸಿಂಹ ಗೇಲಿ

ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಅವಕಾಶ ನೀಡಿ: ಎಸ್‌ಬಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಸಂಸ್ಥೆಗಳು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಭಾರತ, ಉತ್ತಮ ಭಾರತವನ್ನು ರಚಿಸುವ ದೃಷ್ಟಿಯ ಕಡೆಗೆ ಕೆಲಸ ಮಾಡುತ್ತವೆ ಎಂಬ ಭರವಸೆ ಇದೆ ಎಂದು ಹೇಳಿ ಶುಭ ಹಾರೈಸಿದರು. ಅಲ್ಲದೇ ಇಲ್ಲೊಂದು ಸ್ಟೇಡಿಯಂ ನಿರ್ಮಾಣ ಮಾಡೋದಾಗಿ ಸಂಸ್ಥೆಯವರು ಹೇಳಿದ್ದಾರೆ.  ಹೀಗಾಗಿ ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಿರಿ ಎಂದರು. ಕಾರ್ಯಕ್ರಮದಲ್ಲಿ ಸಮಾರಂಭದಲ್ಲಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಶಾಸಕ ಎಸ್.ಟಿ.ಸೋಮಶೇಖರ್ ರೆಡ್ಡಿ  ಇದ್ದರು.

PREV
Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ