ಕೃಷಿ ಸಖಿಯರು ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳು ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ

By Kannadaprabha News  |  First Published Sep 25, 2023, 11:23 AM IST

 ಕೃಷಿ ಸಖಿಯರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬರುವ ಕಾಮಗಾರಿಗಳು, ಯೋಜನೆಗಳ ಅನುಕೂಲಗಳ ಬಗ್ಗೆ ರೈತ, ರೈತ ಮಹಿಳೆಯರಿಗೆ ಮಾಹಿತಿ ಒದಗಿಸಬೇಕು ಎಂದು ಮೈಸೂರು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಬಿ.ಎಂ. ಸವಿತಾ ತಿಳಿಸಿದರು.


 ಮೈಸೂರು : ಕೃಷಿ ಸಖಿಯರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬರುವ ಕಾಮಗಾರಿಗಳು, ಯೋಜನೆಗಳ ಅನುಕೂಲಗಳ ಬಗ್ಗೆ ರೈತ, ರೈತ ಮಹಿಳೆಯರಿಗೆ ಮಾಹಿತಿ ಒದಗಿಸಬೇಕು ಎಂದು ಮೈಸೂರು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಬಿ.ಎಂ. ಸವಿತಾ ತಿಳಿಸಿದರು.

ಸಂಜೀವಿನಿ- ಕೆಎಸ್ಆರ್ ಎಲ್ ಪಿಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ವಿವಿ ಮೈಸೂರಿನ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಪರಿಸರ ಕೃಷಿ ವಿಧಾನಗಳು ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿಸಖಿ) 6 ದಿನಗಳ ತರಬೇತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

ಕೃಷಿಸಖಿಯರು ಪ್ರಮುಖ ಇಲಾಖೆಗಳು ಹಾಗೂ ರೈತರಿಗೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಸಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿ ಶ್ರಮಿಬೇಕು ಎಂದು ಅವರು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ವಿಸ್ತರಣಾ ಶಿಕ್ಷಣ ಘಟಕದ ಬೇಸಾಯಶಾಸ್ತ್ರ ಪ್ರಾಧ್ಯಾಪಕ ಡಾ.ಸಿ. ರಾಮಚಂದ್ರ ಮಾತನಾಡಿ, ಕೃಷಿಸಖಿಯರು ರೈತ, ರೈತ ಮಹಿಳೆಯರಿಗೆ ವಿಷಯ ವಿನಿಮಯ ಮಾಡಿಕೊಡುವಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡಬೇಕಾಗುತ್ತದೆ. ತರಬೇತಿಯ ಮೂಲ ಉದ್ದೇಶ ಸ್ವಸಹಾಯ ಗುಂಪಿನ ಸದಸ್ಯ ಮಹಿಳಾ ರೈತರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಕಾರ್ಯಕ್ರಮಗಳ ವಿಸ್ತರಣಾ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವುದಾಗಿದೆ ಎಂದರು.

ಅಲ್ಲದೆ, ಜೀವನೋಪಾಯ ವೃದ್ಧಿ ಮಾಡುವ ಜೊತೆಗೆ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಹೊಸ ಯೋಜನೆಯಾಗಿದೆ. ಕೇವಲ ಕೃಷಿ ಮಾತ್ರವಲ್ಲದೆ ಮೌಲ್ಯವರ್ಧನೆ, ಕೃಷಿ ಮಾರುಕಟ್ಟೆ, ಕೃಷಿ ತಂತ್ರಜ್ಞಾನಗಳ ಬಗ್ಗೆ ತರಬೇತಿಯನ್ನು ಪಡೆದು ಉದ್ಯೋಗವಕಾಶ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೃಷಿಯಲ್ಲಿ ನವೀನ ತಂತ್ರಜ್ಞಾನಗಳಾದ ಹೊಸ ತಳಿಗಳು, ಹೈಬ್ರಿಡ್‌ ಬಳಕೆ, ಸಮತೋಲನ ಗೊಬ್ಬರಗಳ ಬಳಕೆ, ಸಮಗ್ರ ಕಳೆ ನಿರ್ವಹಣೆ, ಸಮಗ್ರರೋಗ ಮತ್ತು ಕೀಟಗಳ ನಿರ್ವಹಣೆ ಮಾಡುವುದರಿಂದ ಸಕಾಲದಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು. ಈ ನಿಟ್ಟಿನಲ್ಲಿ ಕೃಷಿಸಖಿಯರು ರೈತರಿಗೆ ತಮ್ಮ ವೆಚ್ಚ, ಆದಾಯದ ಪರಿಮಿತಿಯನ್ನು ತಿಳಿಸಿಕೊಡುವಲ್ಲಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ನಾಗನಹಳ್ಳಿಯ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ್, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ.ಜಿ.ಎಚ್. ಯೋಗೇಶ್,

ಸಂಪನ್ಮೂಲ ವಿಜ್ಞಾನಿಗಳಾಗಿ ಡಾ.ಸಿ. ರಾಮಚಂದ್ರ, ಡಾ.ಡಿ.ಕೆ. ಕೃಷ್ಣ ಯಾದವ್, ನಾಗೇಂದ್ರ ಅವರು ಭಾಗವಹಿಸಿದ್ದರು.

click me!