ಪೊಲೀಸ್ ಅಧಿಕಾರಿ ಅಕಾಲಿಕ ನಿಧನ : ಚಿಕಿತ್ಸೆ ಫಲಸದೆ ಸಾವು

Kannadaprabha News   | Asianet News
Published : Nov 09, 2020, 11:09 AM IST
ಪೊಲೀಸ್ ಅಧಿಕಾರಿ ಅಕಾಲಿಕ ನಿಧನ : ಚಿಕಿತ್ಸೆ ಫಲಸದೆ ಸಾವು

ಸಾರಾಂಶ

ಪೊಲೀಸ್ ಅಧಿಕಾರಿಯೋರ್ವರು ಅನಾರೋಗ್ಯದಿಂದ ಅಕಾಲಿಕವಾಗಿ ಮೃತಪಟ್ಟಿದ್ದು ತೀವ್ರ ಸಂತಾಪ ಸೂಚಿಸಲಾಗಿದೆ

ಚಿಕ್ಕಬಳ್ಳಾಪುರ (ನ.09): ಜಿಲ್ಲಾ ಕೇಂದ್ರದ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನಕೇಶವಗೌಡ (58)ಭಾನುವಾರ ತೀವ್ರ ಆನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಗ್ಗವಾದಿ ಗ್ರಾಮದವರು.

ಕರ್ತವ್ಯ ನಿರತ ಪಿಎಸ್‌ಐ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಬಂಧನ ..

ಪಿಎಸ್‌ಐ ಚೆನ್ನಕೇಶವಗೌಡ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್‌, ಚಿಂತಾಮಣಿ ಉಪ ವಿಭಾಗದ ಡಿವೈಎಸ್‌ಪಿ ಲಕ್ಷ್ಮಯ್ಯ ಹಾಗೂ ಅಧಿಕಾರಿ, ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಎಸ್ಪಿ ಮಿಥುನ್‌ ಕುಮಾರ್‌ ಮೃತರ ಹುಟ್ಟೂರಿನಲ್ಲಿ  ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮೃತರ ಅಂತಿಮ ದರ್ಶನ ಪಡೆದು ಚೆನ್ನಕೇಶವಗೌಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ