ಬೇಸಿಗೆ ರಜೆ: ಮೇ 18 ರಿಂದ ಪಿಯು ಕಾಲೇಜು ಪುನಾರಂಭ

Published : Feb 26, 2020, 09:59 AM IST
ಬೇಸಿಗೆ ರಜೆ: ಮೇ 18 ರಿಂದ ಪಿಯು ಕಾಲೇಜು ಪುನಾರಂಭ

ಸಾರಾಂಶ

ಮಾ.28 ರಿಂದ ಮೇ 17ರ ವರೆಗೆ ಬೇಸಿಗೆ ರಜೆ| ಮೇ 18 ರಿಂದ 2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳು ಆರಂಭ| 

ಬೆಂಗಳೂರು(ಫೆ.26): ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. 2019-20ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶವನ್ನು ಮಾ.27 ರಂದು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರು ಪ್ರಕಟಿಸಿ ಮಾ.28 ರಿಂದ ಮೇ 17ರ ವರೆಗೆ ಬೇಸಿಗೆ ರಜೆ ನೀಡಬೇಕು. 

ಮೇ 18 ರಿಂದ 2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಅಷ್ಟರಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದರೆ, ಅಂದೇ ಪ್ರಥಮ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಹಿಂದೆ ಮಾ. 19ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಿ ಬೇಸಿಗೆ ರಜೆ ನೀಡಬೇಕು ಮತ್ತು ಮೇ 2ರಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವಂತೆ ವೇಳಾಪಟ್ಟಿ ಪ್ರಕಟಿಸಿತ್ತು.
 

PREV
click me!

Recommended Stories

28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?