ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

Published : Apr 22, 2021, 12:57 PM ISTUpdated : Apr 22, 2021, 01:02 PM IST
ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಸಾರಾಂಶ

ರಾಜ್ಯದಲ್ಲಿ ಮಹಮಾರಿ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಗತಿಯಲ್ಲಿ ಸಾಗುತ್ತಿದ್ದು ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. 

ಮೈಸೂರು (ಏ.22): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ.  ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಮುಖ ದೇವಾಲಗಳ ಪ್ರವೇಶ ನಿಷೇಧಿಸಲಾಗಿದೆ. 

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ  ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಗಮನಿಸಿ : ನಾಡಿನ ಪ್ರಮುಖ ದೇಗುಲಗಳಿಗೆ ಸಾರ್ವಜನಿಕ ಪ್ರವೇಶ ಬಂದ್‌ ..

ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ.

PREV
click me!

Recommended Stories

ಅಲ್ಲೂರು ಕೆ ಗ್ರಾಮದಲ್ಲಿ 200 ವರ್ಷಗಳ ಇತಿಹಾಸ ಹೊಂದಿರುವ 101 ಎತ್ತುಗಳ ಜಾತ್ರೆ, ಪೂಜೆ
ಬೆಂಗಳೂರಿನಲ್ಲಿ ಡಿಆರ್‌ಡಿಒ ಯೋಜನೆಗೆ 1.27 ಎಕರೆ ಭೂಸ್ವಾಧೀನ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್!