ಚಿಕ್ಕೋಡಿ: ವಸತಿ ಶಾಲೆಯ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು, ಕಾರಣ?

Published : Oct 22, 2024, 09:01 AM IST
ಚಿಕ್ಕೋಡಿ: ವಸತಿ ಶಾಲೆಯ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು, ಕಾರಣ?

ಸಾರಾಂಶ

ಇಂದು ಪರೀಕ್ಷೆ ಹಿನ್ನೆಲೆಯಲ್ಲಿ ಮಧ್ಯ ರಾತ್ರಿ ಮೊದಲ ಮಹಡಿಯಲ್ಲಿ ವಿದ್ಯಾರ್ಥಿನಿ ಓದುತ್ತ ಕುಳಿತಿದ್ದಳು. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 

ಚಿಕ್ಕೋಡಿ(ಅ.22): ವಸತಿ ಶಾಲೆಯ ಮೊದಲನೇ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಿನ್ನೆ(ಸೋಮವಾರ)ನಡೆದಿದೆ. 

ಆಫ್ರಿನ್ ಜಮಾದಾರ(17) ಮೃತ ದುರ್ದೈವಿ ವಿದ್ಯಾರ್ಥಿನಿ. ಮೃತ ಬಾಲಕಿ ಗೋಕಾಕ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿಯಾಗಿದ್ದಾಳೆ.  ಇಂದು ಪರೀಕ್ಷೆ ಹಿನ್ನೆಲೆಯಲ್ಲಿ ಮಧ್ಯ ರಾತ್ರಿ ಮೊದಲ ಮಹಡಿಯಲ್ಲಿ ವಿದ್ಯಾರ್ಥಿನಿ ಓದುತ್ತ ಕುಳಿತಿದ್ದಳು. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 

ಕಿತ್ತೂರು ಉತ್ಸವ: ಬೆಳಗಾವಿಯಲ್ಲಿ ನಾಳೆ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
Read more Articles on
click me!

Recommended Stories

4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು