ಮರಣದ ನಂತರವೂ ಜೀವಿಸಿರುವ ಪುನೀತ್‌

Published : Mar 18, 2023, 05:47 AM IST
 ಮರಣದ ನಂತರವೂ ಜೀವಿಸಿರುವ ಪುನೀತ್‌

ಸಾರಾಂಶ

  ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂತಹ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಬಣ್ಣಿಸಿದರು.

 ಮೈಸೂರು :  ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂತಹ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಬಣ್ಣಿಸಿದರು.

ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಅಂಗವಾಗಿ ನರೇಂದ್ರ ಮೋದಿ ಸೇವಾಟ್ರಸ್ಟ್‌, ಸಮಾಜ ಸೇವಾ ಟ್ರಸ್ಟ್‌, ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ), ಸೇವಾ ಭಾರತಿ, ಲಯನ್ಸ್‌ ಜೀವಧಾರ ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ಸಿದ್ಧಾರ್ಥನಗರದಲ್ಲಿರುವ ಡಾ.ಪಿ.ಎಚ್‌. ರಾಘವೇಂದ್ರ ಶೆಟ್ಟಿನಾಗಮಣಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಹೇಗೆ ಬದುಕಿದ್ದರು ಎಂಬುದು ಮುಖ್ಯ:

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್‌ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು ಎಂದು ಅವರು ಸ್ಮರಿಸಿದರು.

ಸಂಬಂಧ ಇಲ್ಲದವರು ಕೂಡ ಪುನೀತ್‌ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ ಎಂದರು.

ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ 200 ಹೆಚ್ಚು ಮಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು. ಹಾಗೆಯೇ 50 ಹೆಚ್ಚು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ, 100 ಕೆ.ಜಿ ಬಾತು ಮತ್ತು 25 ಕೆ.ಜಿ ಕೇಸರಿ ಬಾತ್‌ ಸಾರ್ವಜನಿಕರಿಗೆ ವಿತರಿಸಲಾಯಿತು.

ಆ ನÜಂತರ ಲೋಹಿತ್‌ ಸಂಗೀತ ವಾದ್ಯ ಸಂಸ್ಥೆಯವರು ಪುನೀತ್‌ ರಾಜ್‌ಕುಮಾರ್‌ ಅವರ ಹಾಡುಗಳನ್ನು ಹಾಡುವ ಮೂಲಕ ಪುನೀತ್‌ ನಮನ ಸಲ್ಲಿಸಿದರು.

ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್‌, ಸಮಾಜ ಸೇವಕ ಮಹೇಂದ್ರ ಸಿಂಗ್‌ ಕಾಳಪ್ಪ, ಎಂಡಿಎ ಸದಸ್ಯೆ ಲಕ್ಷ್ಮೀದೇವಿ, ಸವಿತಾ ಘಾಟ್ಕೆ, ವಿಜಿ, ಸದಾಶಿವ, ಚಂದ್ರು, ವಿದ್ಯಾ, ಬ್ಲಡ್‌ ಆನ್‌ ಕಾಲ್‌ ಕ್ಲಬ್‌ನ ದೇವೇಂದ್ರ ಪರಿಹಾರಿಯ, ಆನಂದ್‌ ಮಂಡೂತ್‌, ಕೆ.ಆರ್‌. ಬ್ಯಾಂಕ್‌ ಉಪಾಧ್ಯಕ್ಷ ಬಸವರಾಜ್‌, ನಟರಾಜ್‌ ಮೊದಲಾದವರು ಇದ್ದರು.

ಕರ್ನಾಟಕ ರತ್ನ ನೀಡಿ ಧನ್ಯ

ಬೆಂಗಳೂರು(ನ.02):  ಕರ್ನಾಟಕದ ರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಧನ್ಯರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕರಾಗಿ ನುಡಿದಿದ್ದಾರೆ.

ಮಂಗಳವಾರ ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ರಾಜ್ಯದೆಲ್ಲೆಡೆ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಅಭಿಮಾನದ ಸಾಗರವೇ ಹರಿದಿದೆ. ಪುನೀತ್‌ ಅವರು ನಮ್ಮ ನಡುವೆಯೇ ಇದ್ದಾರೆ. ನಮ್ಮೆಲ್ಲರ ಮನದಲ್ಲಿದ್ದಾರೆ. ವರ್ಷಧಾರೆಯ ನಡುವೆಯೂ ವಿಚಲಿತರಾಗದೆ ಕಾರ್ಯಕ್ರಮ ವೀಕ್ಷಿಸಲು ಅಭಿಮಾನಿಗಳ ಸಾಗರವೇ ಹರಿದುಬಂದಿದೆ. ಕನ್ನಡ ನೆಲದಲ್ಲಿ ನಿಮ್ಮ ಮೇಲಿರುವ ಪ್ರೀತಿ, ಅಭಿಮಾನಿಗಳಿಗಾಗಿಯಾದರೂ ಮತ್ತೆ ಹುಟ್ಟಿಬನ್ನಿ’ ಎಂದು ಹೇಳಿದರು.

ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

‘ನಟ ಸಾರ್ವಭೌಮ ಡಾ.ರಾಜ್‌ಕುಮಾರ್‌ ಮತ್ತು ಪಾರ್ವತಮ್ಮ ಅವರ ಆರ್ಶೀವಾದದಿಂದ ಜನಿಸಿದ ಅಪ್ಪು ಇಂದು ಎಲ್ಲರ ಮನದಲ್ಲಿ ನೆಲೆಸಿದ್ದಾರೆ. ಕರ್ನಾಟಕ ಒಬ್ಬ ರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಇದು ನಾಡಿನ ಹೆಮ್ಮೆ. ನಮಗೆ ಪ್ರಶಸ್ತಿ ನೀಡುವ ಸೌಭಾಗ್ಯ ಸಿಕ್ಕಿದ್ದು, ನನ್ನ ಮತ್ತು ನನ್ನ ಸರ್ಕಾರದ ಪುಣ್ಯ ಭಾಗ್ಯ’ ಎಂದರು.

PREV
Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?