ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿಗೆ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್‌ಗೆ 11,750 ರು. ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‌ವರೆಗೆ ಖರೀದಿ ಮಾಡಲಿದ್ದು, ಫೆಬ್ರವರಿ 2ರಿಂದ ನೋಂದಣಿ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿಗೆ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್‌ಗೆ 11,750 ರು. ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‌ವರೆಗೆ ಖರೀದಿ ಮಾಡಲಿದ್ದು, ಫೆಬ್ರವರಿ 2ರಿಂದ ನೋಂದಣಿ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಉಂಡೆ ಕೊಬ್ಬರಿ ಖರೀದಿ ಸಂಬಂಧ ನಫೆಡ್ ಹಾಗೂ ಎಪಿಎಂಸಿ ಸಮಿತಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಈ ಸಂಬಂಧ 2023ರ ಜನವರಿ 27ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ನಿಗದಿಗೊಳಿಸಲಾಗಿದ್ದು, ನೋಂದಣಿ ಕಾರ್ಯದೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದ್ದು ಎಂದು ಸೂಚಿಸಿದರು.ಪ್ರತಿ ಎಕರೆಗೆ 6 ಕ್ವಿಂಟಲ್ ಗರಿಷ್ಠ ಪ್ರಮಾಣದಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕೊಬ್ಬರಿ ಖರೀದಿ ಪ್ರಮಾಣ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಶಿರಾ, ತಿಪಟೂರು, ಗುಬ್ಬಿ, ಚೇಳೂರು, ಕುಣಿಗಲ್, ತುಮಕೂರು, ಚಿಕ್ಕನಾಯಕನಹಳ್ಳಿ, ಹುಳಿಯಾರು, ತುರುವೇಕೆರೆ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿಗಳಲ್ಲಿ ಕೊಬ್ಬರಿ ಖರೀದಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ, ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದ್ದು, ನಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಉಂಡೆ ಕೊಬ್ಬರಿ ಖರೀದಿಸುವ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ರೈತರಿಂದ ಮಾತ್ರ ಉಂಡೆ ಕೊಬ್ಬರಿಯನ್ನು ಖರೀದಿಸಬೇಕು ಮತ್ತು ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು ಎನ್‌ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನ ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸುವುದು ಎಂದು ಸೂಚಿಸಿದರು.
ತಹಸೀಲ್ದಾರ್‌ಗಳು ಸ್ಮಶಾನ ಭೂಮಿಯನ್ನು ಪಿಡಿಓಗಳಿಗೆ ಪಕ್ಕಾ ಹಸ್ತಾಂತರ ಮಾಡಬೇಕು. ತದನಂತರ ಪಿಡಿಓಗಳು ಈ ಕುರಿತಂತೆ ಗ್ರಾಮದಲ್ಲಿ ಟಾಂಟಾಂ ಹೊರಡಿಸಬೇಕು. ಸರ್ಕಾರಿ ಜಮೀನಾಗಿದ್ದಲ್ಲಿ ಸ್ಮಶಾನಕ್ಕಾಗಿ ಬೌಂಡರಿ ನಿಗಧಿಪಡಿಸಿ, ಸರ್ವೆ ಮಾಡಿಸಿ ಮಹಜರ್ ಮಾಡಿ, ಹ್ಯಾಂಡ್ ಸ್ಕೆಚ್ ಮಾಡುವ ಮೂಲಕ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಿರಿಸಬೇಕು ಎಂದು ತಹಸೀಲ್ದಾರ್ ಅವರಿಗೆ ಡೀಸಿ ಸೂಚಿಸಿದರು. ಶಾಲಾ ಕಟ್ಟಡಗಳ ನಿವೇಶನಗಳಿಗೆ ಖಾತಾ ಮಾಡಿಕೊಡುವ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಮುಗಿಸುವಂತೆ ಸೂಚಿಸಿದ ಅವರು, ಗೋಮಾಳಗಳಲ್ಲಿ ಗ್ರಾಂಟ್‌ಆಗಿ, ಸಾಗುವಳಿ ಚೀಟಿ ಕೊಟ್ಟು, ಖಾತೆಯಾಗಿರುವಂತಹ ಪಟ್ಟಿಗಳನ್ನು ಕಳುಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಮತ್ತಿತರರು ಹಾಜರಿದ್ದರು.
ಫೆ.6ಕ್ಕೆ ಪ್ರಧಾನಿ ಮೋದಿ ಗುಬ್ಬಿಗೆ: ಜಿಲ್ಲಾಧಿಕಾರಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನ ಹೆಲಿಕಾಪ್ಟರ್ ಉತ್ಪಾದನಾ ಘಟಕ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಸಕಲ ಜೀವರಕ್ಷಕ ವ್ಯವಸ್ಥೆಗಳುಳ್ಳ ಆ್ಯಂಬುಲೆನ್ಸ್ ಸೇರಿದಂತೆ ಎಲ್ಲಾ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವಂತೆ ಡಿಎಚ್‌ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಡೀಸಿ ಪಾಟೀಲ ಸೂಚಿಸಿದರು.ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಬಸ್ ಹಾಗೂ ರೈಲು ಪ್ರಯಾಣಿಕರು ಕಡ್ಡಾಯವಾಗಿ ಮಾಸ್‌್ಕ ಧರಿಸುವಂತೆ ಮತ್ತು ಜಿಲ್ಲೆಯ ಜನತೆ ಕೋವಿಡ್ ಮುನ್ನೆಚ್ಚರಿಕೆ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಟಿ ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು. ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಒದಗಿಸುವಿಕೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಸ್ವತಃ ಭೇಟಿ ನೀಡಬೇಕು. ರಾರಯಂಪ್, ಶೌಚಾಲಯ, ಕಟ್ಟಡ ಬಣ್ಣ, ದುರಸ್ತಿ ಕುರಿತು ಪರಿಶೀಲಿಸಿ ವರದಿ ಸಲ್ಲಿಸಬೇಕು.
ಪಾಟೀಲ ಡೀಸಿ