ಪುತ್ತೂರು ನಗರದ ಪದವಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ನಾಲ್ಕನೇ ಆರೋಪಿ ವಿದ್ಯಾರ್ಥಿ ಪ್ರಜ್ವಲ್‌ಗೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಂಗಳೂರು(ನ.29): ಪುತ್ತೂರು ನಗರದ ಪದವಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ನಾಲ್ಕನೇ ಆರೋಪಿ ವಿದ್ಯಾರ್ಥಿ ಪ್ರಜ್ವಲ್‌ಗೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಿಯು ಎರಡು ಲಕ್ಷ ರು. ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷ್ಯ ನಾಶಪಡಿಸಲು ಯತ್ನಿಸಬಾರದು. ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಪ್ರದೇಶ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.
undefined
ಭಾಗವತ ಪಟ್ಲ ಸತೀಶ್ ಪರ ಬೆಂಗಳೂರು ಯಕ್ಷಾಭಿಮಾಗಳ ಧರಣಿ
ಅರ್ಜಿದಾರರ ಪರ ವಕೀಲ ಎಂ.ಅರುಣ್ ಶ್ಯಾಮ್ ವಾದಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರನ ವಿರುದ್ಧದ ತನಿಖೆ ಪೂರ್ಣಗೊಂಡು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಕೆಯಾಗಿದೆ. ಅರ್ಜಿದಾರ ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾನೆ. ಜಾಮೀನು ದೊರೆಯದಿದ್ದರೆ ಆತನ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಕೋರಿದ್ದರು. ಈ ಅಂಶಗಳನ್ನು ಪುರಸ್ಕರಿಸಿದ ನ್ಯಾಯಪೀಠ ಆರೋಪಿಗೆ ಜಾಮೀನು ನೀಡಿದೆ.
ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಗ್ಯಾಂಗ್ ರೇಪ್: ಇಬ್ಬರು ಕ್ಲಾಸ್‌ಮೇಟ್ಸ್ ಅರೆಸ್ಟ್
2019ರ ಮಾಚ್‌ರ್ ಏಪ್ರಿಲ್ 1ರಿಂದ 7ರಂದು ನಡುವೆ ಪುತ್ತೂರು ನಗರದ ಪದವಿ ಕಾಲೇಜೊಂದರ ಪದವಿ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಅರ್ಜಿದಾರ ಸೇರಿ ಐವರು ವಿದ್ಯಾರ್ಥಿಗಳು ಕಾರಿನಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಖಾಸಗಿ ಬಸ್‌ಗಳಲ್ಲಿ ಈಗ ದಿಢೀರ್ ತಪಾಸಣೆ..! ಟಿಕೆಟ್ ಇಲ್ಲಾಂದ್ರೆ ಬೀಳುತ್ತೆ ದಂಡ
ಪ್ರಕರಣದಲ್ಲಿ ಅರ್ಜಿದಾರ ನಾಲ್ಕನೇ ಆರೋಪಿಯಾಗಿದ್ದಾನೆ. ಆತನ ವಿರುದ್ಧ ತನಿಖಾಧಿಕಾರಿಗಳು ಭಾರತೀಯ ದಂಡ ಸಂಹಿತೆ, ಪರಿಶಿಷ್ಟಜಾತಿ ಮತ್ತು ದೌರ್ಜನ್ಯ ತಡೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅನ್ವಯ ವಿವಿಧ ವಿಧಿಗಳಡಿ ದೂರು ದಾಖಲಾಗಿತ್ತು.
ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ: ಐವರು ವಿದ್ಯಾರ್ಥಿಗಳು ಅರೆಸ್ಟ್