ಗುಣಮಟ್ಟದ ಶಿಕ್ಷಣ ಸರ್ಕಾರದ ಜವಾಬ್ದಾರಿ: ಪರಂ

By Kannadaprabha News  |  First Published Aug 22, 2023, 8:17 AM IST

ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ 14 ವರ್ಷದವರೆಗೆ ಕಡ್ಡಾಯವಾಗಿ ಗುಣಮಟ್ಟದ ಉಚಿತ ಶಿಕ್ಷಣ ನೀಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್‌ ಅವರು ಹೇಳಿದರು.


  ತುಮಕೂರು: ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ 14 ವರ್ಷದವರೆಗೆ ಕಡ್ಡಾಯವಾಗಿ ಗುಣಮಟ್ಟದ ಉಚಿತ ಶಿಕ್ಷಣ ನೀಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್‌ ಅವರು ಹೇಳಿದರು.

ನಗರದ ಎಂಪ್ರೆಸ್‌ ಶಾಲೆಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅಂಗವಾಗಿ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಗಳ ಉದ್ಘಾಟಿಸಿ ಮಾತನಾಡಿದರು. ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಪರಿಸರ ವಾತಾವರಣ ನಿರ್ಮಾಣ, ಸುಸಜ್ಜಿತವಾದ ಕೊಠಡಿ ಹಾಗೂ ಆಟದ ಮೈದಾನಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ ಅವರು ದೇಹವು ಸದೃಢವಾಗಿರಬೇಕು. ಗ್ರಾಮೀಣ ಭಾಗದ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ನಮ್ಮ ಸರ್ಕಾರ ಬಾಳೆಹಣ್ಣು, ಮೊಟ್ಟೆ, ಚಿಕ್ಕಿ ವಿತರಣೆ ಮಾಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

Tap to resize

Latest Videos

ಜಿಲ್ಲೆಯಲ್ಲಿ ಎಲ್ಲಾ ಹಾಗೂ ಅನುದಾನಿತ ಶಾಲೆಗಳ 2 ಲಕ್ಷ ಇಪ್ಪತ್ತಾರು ಸಾವಿರ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ 36 ಪ್ಯಾರಾಮೀಟರ್‌ಗಳಲ್ಲಿ ಅವರ ಆರೋಗ್ಯ ತಪಾಸಣೆಯನ್ನು ಮಾಡಲಾಗುವುದು. ಇದರಿಂದ ಅವರಲ್ಲಿರುವ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಮುಂದೆ ಸಂಭವಿಸಬಹುದಾದ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ಇಂದಿನ ಮಕ್ಕಳು ಆಧುನಿಕತೆಯ ಜೊತೆಗೆ ಬೆಳೆಯುತ್ತಿದ್ದಾರೆ. ಅವರಿಗೆ ಬೇಕಾದ ಸಂದೇಹವಿರುವ ವಿಷಯದ ಬಗ್ಗೆ ಇಂಟರ್‌ನೆಟ್‌ ಬಳಸಿಕೊಂಡು ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಕ್ಷಣಾರ್ಧದಲ್ಲಿ ಉತ್ತರ ಹುಡುಕಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕೆಂದು ತಿಳಿಸಿದರು.

ಶಾಸಕ ಜ್ಯೋತಿ ಗಣೇಶ್‌ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ನೀಡುವ ಬಿಸಿಯೂಟ ಯೋಜನೆಗೆ ತರಕಾರಿ ತರಲು ಶಿಕ್ಷಕರನ್ನು ನಿಯೋಜಿಸಿರುವುದರಿಂದ ಅವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಆದ್ದರಿಂದ ಮಕ್ಕಳಿಗೆ ಕಲಿಕೆಯಲ್ಲಿ ಸಮಸ್ಯೆ ಆಗುತ್ತಿರುವುದನ್ನು ತಪ್ಪಿಸಲು ಜಿಲ್ಲೆಯ ಯಾವುದಾದರು ಒಂದು ಏಜೆನ್ಸಿ ಗುರುತಿಸಿ, ಅವರು ಎಲ್ಲಾ ಶಾಲೆಗಳಿಗೆ ಗುಣಮಟ್ಟದ ತರಕಾರಿಗಳನ್ನು ಸರಬರಾಜು ಮಾಡಲು ಅನುವು ಮಾಡಿಕೊಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಪ್ರಭಾವತಿ ಸುಧೀಶ್ವರ್‌, ಶಾಸಕರಾದ ಸುರೇಶ್‌ಗೌಡ, ವೆಂಕಟೇಶ್‌, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಾಪೂರವಾಡ್‌, ಉಪ ವಿಭಾಗಾಧಿಕಾರಿ ಗೌರವ್‌ ಕುಮಾರ್‌ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗಧಾಮಯ್ಯ, ತಹಸೀಲ್ದಾರ್‌ ಸಿದ್ದೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ, ಶಾಲೆಯ ಮುಖ್ಯಶಿಕ್ಷಕ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ರಾಜ್ಯದಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು. ಸರ್ಕಾರ ಶಾಲೆಗಳು ಎಂದು ಅಸಡ್ಡೆ ತೋರುವ ಈ ಕಾಲದಲ್ಲಿ ಎಂಪ್ರೆಸ್‌ ಶಾಲೆಯು ಅದನ್ನು ಮೀರಿ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಡುವುದರ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಶಾಲೆಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಕೊಡಲಾಗುವುದು.

ಡಾ.ಜಿ.ಪರಮೇಶ್ವರ ಗೃಹಸಚಿವ

click me!