ಬೈಕ್ ನಿಲ್ಲಿಸುವ ವಿಚಾರದಲ್ಲಿ ಇಬ್ಬರು ಯುವಕರ ಮಧ್ಯೆ ನಡೆದ ಗಲಾಟೆ| ಜಿಲ್ಲೆಯ ಬಾದಾಮಿ ನಗರದಲ್ಲಿ ನಡೆದ ಘಟನೆ| ಪರಿಸ್ಥಿಯನ್ನು ಹತೋಟಿಗೆ ತರಲು ಪೊಲೀಸರಿಂದ ಲಘು ಲಾಠಿ ಪ್ರಕಾರ|
ಬಾಗಲಕೋಟೆ[ಡಿ.14]: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಎರಡು ದೊಡ್ಡ ಗುಂಪುಗಳಾಗಿ ಭಾರಿ ವಾಗ್ವಾದಕ್ಕೆ ಕಾರಣವಾದ ಘಟನೆ ಜಿಲ್ಲೆಯ ಬಾದಾಮಿ ನಗರದಲ್ಲಿ ಇಂದು[ಶನಿವಾರ] ನಡೆದಿದೆ.
ಶುಕ್ರವಾರ ರಾತ್ರಿ ಬೈಕ್ ನಿಲ್ಲಿಸುವ ವಿಚಾರದಲ್ಲಿ ಇಬ್ಬರು ಯುವಕರ ಮಧ್ಯೆ ನಡೆದ ಗಲಾಟೆ ನಡದಿತ್ತು. ನಿನ್ನೆ ರಾತ್ರಿ ನಡೆದ ಘಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಿಲ್ಲಾ ಮತ್ತು ತಟಕೋಟಿ ಕಾಲೋನಿ ಜನರ ಮಧ್ಯೆ ಮತ್ತೆ ವಾಗ್ವಾದ ಆರಂಭವಾಗಿತ್ತು. ಎರಡು ಗುಂಪುಗಳ ಮಧ್ಯೆ ವಾಗ್ವಾದ ತಾರಕಕ್ಕೇರಿತ್ತು ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೀಗಾಗಿ ಗಲಾಟೆಯನ್ನು ನಿಯಂತ್ರಿಸಲು ಪೋಲಿಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಬಳಿಕಲ ಎರಡೂ ಗುಂಪುಗಳ ಮಧ್ಯೆ ಮಧ್ಯಸ್ಥಿಕೆ ಮಾಡಿ ರಾಜಿ ಮಾಡಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.