ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸಿಎಂ ಭರವಸೆ

Published : Feb 04, 2023, 06:20 AM IST
ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಶೀಘ್ರ  ಕ್ರಮ: ಸಿಎಂ ಭರವಸೆ

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಹೇಳಿದರು.

ಮದ್ದೂರು (ಫೆ.4): ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಹೇಳಿದರು.

ಎಚ್‌.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ನಡೆದ ಎಚ್‌ಕೆವಿ ಸಾಂಸ್ಕೃತಿಕ ಸೌರಭ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರಸ್ತಾಪ ಮಾಡಿದ್ದೆ ಎಂದು ತಿಳಿಸಿದರು.

Mandya Politics: ಸುಮಲತಾ ಬಿಜೆಪಿಗೆ ಬಂದರೆ ತಕ್ಕದಾದ ಸ್ಥಾನಮಾನ: ಸಚಿವ ನಾರಾಯಣಗೌಡ

ಈ ಹಿಂದೆ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಶಿಕ್ಷಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ವಿಳಂಭವಾಗಿದೆ ಎಂದು ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈಗ ನನ್ನ ಮನವಿಗೆ ಸಾಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಕಳೆದ 7 ವರ್ಷಗಲಿಂದ ಖಾಲಿಯಿರುವ ಶೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆಂದು ಹೊರಟ್ಟಿಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ ಸದಸ್ಯನಾದ ನಂತರ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಖಾಸಗಿ ಶಾಲೆಗಲಿಗೆ ನೀಡುವಂತೆ ಹೋರಾಟ ನಡೆಸಿದ್ದೇನೆ. ಅನುದಾನಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಅಗತ್ಯ ಸೌಲಭ್ಯ ಕುರಿತು ಸಭೆ ನಡೆಸಿ ಅಹವಾಲು ಸಲ್ಲಿಸಿದರೆ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೌಲಭ್ಯ ಕಲ್ಪಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಖಾಸಗಿ ಶಾಲೆಗಳ ಶಿಕ್ಷಕರ ಹಳೆ ಪಿಂಚಣೆ ವ್ಯವಸ್ಥೆಯನ್ನು ಜಾರಿ ಮಾಡುವಂತೆ ಒತ್ತಾಯ ಮಾಡಲಾಗುತ್ತಿದೆ. ಆದರೆ, ಅಧಿಕಾರಿಗಳು ಪಿಂಚಣೆ ವ್ಯವಸ್ಥೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಪ್ರಸ್ತಾವಿಕವಾಗಿ ಮಾತನಾಡಿದರು, ಮಂಡ್ಯ ಪಿಇಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎಸ್‌.ವಿಜಯಾನಂದ, ಮಾಜಿ ಶಾಸಕಿ ನಾಗಮಣಿ ನಾಗೇಗೌಡ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಸಭಾಪತಿ ಬಸವರಾಜ ಹೊರಟ್ಟಿಹಾಗೂ ಗಣ್ಯರನ್ನು ಜಾನಪದ ಕಲಾತಂಡಗಳೊಂದಿಗೆ ಎತ್ತಿನ ಗಾಡಿ ಮೂಲಕ ಮೆರವಣಿಗೆ ನಡೆಸಲಾಯಿತು.

ಸರ್ಕಾರದಿಂದ ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ: ಸಚಿವ ಬಿ.ಸಿ.ನಾಗೇಶ್

ಎಂ.ಎಚ್‌.ಚನ್ನೇಗೌಡ ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಕೆ.ಟಿ.ಚಂದು, ಅಧ್ಯಕ್ಷ ಎಂ.ಸ್ವರೂಪ್‌ ಚಂದ, ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ನಿರ್ದೇಶಕ ರಾಮಲಿಂಗಯ್ಯ, ಪ್ರಾಂಶುಪಾಲರಾದ ಶಂಕರೇಗೌಡ, ಯು.ಎಸ….ಶಿವಕುಮಾರ್‌ , ಉಪ ಪ್ರಶಾಂಸುಪಾಲ ನಂದಿನಿ, ಪಂಚಲಿಂಗಯ್ಯ, ರೇವಣ್ಣ, ಪ್ರಕಾಶ್‌ ಇದ್ದರು.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ