ರಾಹುಲ್ ಆಗಮನ ಹಿನ್ನೆಲೆಯಲ್ಲಿ ಕೂಡಲಸಂಗಮಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ, ಬಾಗಲಕೋಟೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿಯಾಗಿ ಕಾರ್ಯಕ್ರಮದ ಸಿದ್ಧತೆ ವೀಕ್ಷಣೆ ಮಾಡಿದರು.
ಬಾಗಲಕೋಟೆ(ಏ.22): ರಾಹುಲ್ ಗಾಂಧಿ ಅವರು ನಾಳೆ(ಏ.23)ರಂದು ಬೆಳಿಗ್ಗೆ 10 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಭೇಟಿ ನೀಡಲಿದ್ದು, ಕೂಡಲಸಂಗಮದ ಸಂಗಮೇಶ್ವರ ದೇವಸ್ಥಾನದ ದರ್ಶನ ಬಳಿಕ ಬಸವಣ್ಣನವರ ಐಕ್ಯಮಂಟಪಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಬಸವ ಮಂಟಪದಲ್ಲಿ ನಡೆಯುವ ಬಸವ ಪಂಚಮಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಕೂಡಲಸಂಗಮದಿಂದ ವಿಜಯಪುರಕ್ಕೆ ತೆರಳಲಿದ್ದಾರೆ. ರಾಹುಲ್ ಆಗಮನ ಹಿನ್ನೆಲೆಯಲ್ಲಿ ಕೂಡಲಸಂಗಮಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ, ಬಾಗಲಕೋಟೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿಯಾಗಿ ಕಾರ್ಯಕ್ರಮದ ಸಿದ್ಧತೆ ವೀಕ್ಷಣೆ ಮಾಡಿದರು.
undefined
ಬಾಗಲಕೋಟೆಯಲ್ಲಿ ವಿನೂತನ ಪ್ರಯೋಗ: ಮತದಾನ ಹೆಚ್ಚಿಸಲು ಕರೆಯೋಲೆ
ಲಿಂಗಾಯತ ಧರ್ಮಿಯರಿಗೆ ಶ್ರದ್ಧಾ ಕೇಂದ್ರವಾಗಿರುವ ಕೂಡಲಸಂಗಮದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಕರೆತರುವ ಮೂಲಕ ಲಿಂಗಾಯತ ಮತಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ.