* ಕರ್ನಾಟಕದಲ್ಲಿ ಭಾರೀ ಮಳೆ
* ಪ್ರವಾಹ ಪರಿಸ್ಥಿತಿಯ ಮಾಃಇತಿ ಪಡೆದ ಸಿಎಂ ಯಡಿಯೂರಪ್ಪ
* ನೆರವಿಗೆ ಧಾವಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಬೆಂಗಳೂರು( ಜು. 23) ಪ್ರವಾಹ ಪೀಡಿತ ಜಿಲ್ಲೆಗಳ ಬಗ್ಗೆ ಮಾಹಿತಿಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಪಡೆದುಕೊಂಡಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಸೂಚನೆ ನೀಡಿದ್ದಾರೆ.
ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಸೂಚನೆ ನೀಡಿದ್ದಾರೆ. ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸೂಚನೆ ನೀಡಲಾಗಿದೆ.
undefined
ನೆರೆ ಪ್ರವಾಹಕ್ಕೆ ಏನೆಲ್ಲ ಕ್ರಮ ತೆಗೆದುಕೊಂಡಿದ್ದೇವೆ?
ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಬೇಕು. ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ.
ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸೇನಾ ಹೆಲಿಕಾಪ್ಟರ್ ಗಳನ್ನು ಸನ್ನದ್ದವಾಗಿಟ್ಟುಕೊಳ್ಳಲು ತಿಳಿಸಲಾಗಿದೆ. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು . ಮುಂದಿನ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ ಮಾಡಲು ಸಿಎಂ ಕಟ್ಟಪ್ಪಣೆ ಮಾಡಿದ್ದಾರೆ.