ಕೋಲಾರ ಜಿಲ್ಲೆಯಲ್ಲಿ ಮಳೆ ಹಾನಿ; ರೈತರಿಗೆ ಸ್ವಲ್ಪ ಸಿಹಿ ಸ್ವಲ್ಪ ಕಹಿ

By Ravi Nayak  |  First Published Aug 10, 2022, 1:46 AM IST

ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆ ಆಗಿದೆ.ಬಹುತೇಕ ಕೆರೆ, ಕುಂಟೆಗಳು ತುಂಬಿದ್ದು,ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.ಆದ್ರೆ ಹೆಚ್ಚಿನ ಪಾಲು ರೈತರಿಗೆ ನಷ್ಟ ಉಂಟಾಗಿದ್ದು,ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ


ವರದಿ; ದೀಪಕ್, ಏಷಿಯಾನೆಟ್ ಸುವರ್ಣ ನ್ಯೂಸ್

ಕೋಲಾರ (ಆ.10) ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆ ಆಗಿದೆ.ಬಹುತೇಕ ಕೆರೆ, ಕುಂಟೆಗಳು ತುಂಬಿದ್ದು,ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.ಆದ್ರೆ ಹೆಚ್ಚಿನ ಪಾಲು ರೈತರಿಗೆ ನಷ್ಟ ಉಂಟಾಗಿದ್ದು,ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ.ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಕೋಲಾರ(Kolara) ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಸುರಿದಿರುವ ಮಳೆಗೆ 250 ಕ್ಕೂ ಹೆಚ್ಚು ಹೆಕ್ಟೇರ್‌ ಕೃಷಿ ಮತ್ತು ತೋಟಗಾರಿಕೆ ಬೆಳೆ ನಾಶವಾಗಿದ್ದು,ರೈತರಿಗೆ ಕೋಟ್ಯಂತರ ರುಪಾಯಿ ನಷ್ಟವಾಗಿದೆ.ಇತ್ತೀಚಿಗೆ ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು ಹರಿದು ಹಲವೆಡೆ ಕೆರೆಗಳು ತುಂಬುತ್ತಿದ್ದರಿಂದ ರೈತರು ಕೃಷಿ,ತೋಟಗಾರಿಕೆ ಬೆಳೆ ಉತ್ಪಾದನೆ ಚುರುಕು ಗೊಳಿಸಿದ್ದರು.

Tap to resize

Latest Videos

Kolara Rains; ಮಳೆಯ ನೀರಿನಲ್ಲೇ ಕುಳಿತು ಪಾಠ ಕೇಳುತ್ತಿರುವ ಮಕ್ಕಳು!

ಕಳೆದ ವರ್ಷವೂ ಸಹ ಭರ್ಜರಿ ಮಳೆ ಸುರಿದಿದ್ದರಿಂದ ಪಾತಾಳಕ್ಕೆ ಕುಸಿದಿದ್ದ ಅಂತರ್ಜಲ ಮಟ್ಟವೂ ಏರಿಕೆಯಾಗಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿತ್ತು. ಇದರಿಂದ ಉತ್ತೇಜಿತರಾಗಿದ್ದ ಜಿಲ್ಲೆಯ ರೈತರು,ಉತ್ಸಾಹದಿಂದಲೇ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದ್ದರು.ಆದರೆ ಅದ್ಯಾವ ಸಮಯದಲ್ಲಿ ಮಳೆ ಎಂಟ್ರಿ ಕೊಡ್ತೋ ಗೊತ್ತಿಲ್ಲ,ದಾಖಲೆ ಪ್ರಮಾಣದಲ್ಲಿ ಸತತ ಏಳು ದಿನಗಳ ಕಾಲ ಎಡೆಬಿಡದೆ ಮಳೆ ಸುರಿದು ಉಂಟಾದ ಪ್ರವಾಹ ಪರಿಸ್ಥಿತಿಯಲ್ಲಿ ಹೊಲ, ಗದ್ದೆ, ತೋಟಗಳು ಜಲಾವೃತ ಗೊಂಡು,ಬೆಳೆ ನಷ್ಟ ಆಗಿದೆ.

ಕೆರೆ ಭರ್ತಿಯಾಗಿ ಕೋಡಿಯಲ್ಲಿ ನೀರು ರಭಸದಿಂದ ಹರಿದು,ಸುತ್ತಲಿನ ಜಮೀನುಗಳು ಜಾಲವೃತವಾಗಿ ಬಿತ್ತನೆ ಮಾಡಿದ್ದ ರಾಗಿ, ತೊಗರಿ, ಟೊಮೊಟೊ,ಹೂ ಸೇರಿದಂತೆ ಹಲವು ಬೆಳೆಗಳು ನೀರಿನಲ್ಲಿ ತೊಳೆದು ಹೋಗಿದೆ.ಇನ್ನು ಬೆಳೆ ಹಾನಿ ಸೇರಿದಂತೆ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಬಗ್ಗೆ ಜಿಲ್ಲಾಡಳಿತ ಸಮೀಕ್ಷೆ ನಡೆಸಿದ್ದು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

 ಕೋಲಾರ ಜಿಲ್ಲೆಯಲ್ಲಿ ಇದುವರೆಗೂ 9 ಮನೆಗಳು ಭಾಗಶಃ ಹಾನಿಯಾಗಿದ್ದು,ಯಾವುದೇ ಪ್ರಾಣಹಾನಿಯಾಗಿಲ್ಲವೆಂದು ಕೋಲಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.‌ಕೋಲಾರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಇದುವರೆಗೂ ಕೋಲಾರ ಜಿಲ್ಲೆಯಲ್ಲಿ 87 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಮತ್ತು 69 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಸೇರಿದಂತೆ ಒಟ್ಟು 156 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.

 70 ಲಕ್ಷ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳು 21 ಲಕ್ಷ ನಷ್ಟ ಉಂಟಾಗಿದ್ದು, ಒಟ್ಟು 113 ರೈತರು ಬೆಳೆ ಕಳೆದು ಕೊಂಡಿದ್ದಾರೆ ಅದರಲ್ಲೂ ಅತಿ‌ ಹೆಚ್ಚು 41 ಹೆಕ್ಟೇರ್ ಪ್ರದೇಶದಲ್ಲಿ ಟೊಮ್ಯಾಟೊ‌ ಬೆಳೆ‌ ನಷ್ಟವುಂಟಾಗಿದೆ.ಮಳೆಯಿಂದ ರಾಜ್ಯ ಹಾಗೂ‌ ಜಿಲ್ಲೆಗೆ ಸಂಪರ್ಕ ಕಲ್ಪಿಸುವ 22 ಕಿ. ಮೀ ರಸ್ತೆ ಹಾಳಾಗಿದೆ.ಈಗಾಗಲೆ ಸರ್ಕಾರಕ್ಕೆ ಬೆಳೆ ಹಾನಿ ಕುರಿತು ಪ್ರಸ್ತಾಪ ಸಲ್ಲಿಸಲಾಗಿದೆ.ಎನ್ ಡಿಅರ್ ಎಫ್ ಗೈಡ್ ಲೈನ್ಸ್ ಪ್ರಕಾರ ಪರಿಹಾರ ನೀಡಲಾಗುವುದು.ಇನ್ನು ಕೋಲಾರ ಜಿಲ್ಲೆಯಲ್ಲಿ ಇದುವರೆಗೂ ಯಾವುದೆ ಪ್ರಾಣ, ಜಾನುವಾರು ಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ರು.

ಅಭಿವೃದ್ಧಿ ವಿಚಾರದಲ್ಲೂ ರಾಜಕೀಯ: ಸಮಸ್ಯೆಯ ಬಗ್ಗೆ ಕೇಳೋರಿಲ್ಲ ಎಂದು ಸಚಿವರು ವಾಗ್ದಾಳಿ!

 ಒಟ್ಟಾರೆ ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆಯಿಂದಾಗಿ ಕೆಲ ರೈತರ ನಿದ್ದೆಗೆಡಿಸಿದೆ.ಜಿಲ್ಲಾಡಳಿತ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಉಸ್ತುವಾರಿ ಸಚಿವರಾದ ಮುನಿರತ್ನ ಬೆಳೆ ನಾಶವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ,ಜಿಲ್ಲಾಧಿಕಾರಿಗಳಿಂದ ಸಂಕ್ಷಿಪ್ತ ಮಾಹಿತಿ ಪಡೆದುಕೊಂಡಿದ್ದಾರೆ.ಆದಷ್ಟು ಬೇಗ ನೊಂದ ರೈತರ ನೆರವಿಗೆ ದಾವಿಸಲಿ ಅನ್ನೋದು ನಮ್ಮ ಆಶಯ ಕೂಡ...

click me!