ಮಲೆನಾಡು, ಬಯಲುಸೀಮೆಯಲ್ಲಿ ಮಳೆಯ ಆರ್ಭಟ: ಚಾರ್ಮಾಡಿ ಘಾಟ್‌ನಲ್ಲಿ ಟ್ರಾಫಿಕ್ ಜಾಮ್!

Published : May 20, 2024, 08:17 PM IST
ಮಲೆನಾಡು, ಬಯಲುಸೀಮೆಯಲ್ಲಿ ಮಳೆಯ ಆರ್ಭಟ: ಚಾರ್ಮಾಡಿ ಘಾಟ್‌ನಲ್ಲಿ ಟ್ರಾಫಿಕ್ ಜಾಮ್!

ಸಾರಾಂಶ

ಜಿಲ್ಲೆಯ ಬಯಲು ಹಾಗೂ ಮಲೆನಾಡಿನ ಎಲ್ಲಾ ತಾಲ್ಲೂಕುಗಳಲ್ಲೂ ಸೋಮವಾರ ಉತ್ತಮ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆಲವೆಡೆ ಅಬ್ಬರದ ಮಳೆಗೆ ಅನಾಹುತಗಳೂ ಸಂಭವಿಸಿದೆ. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಮೇ.20): ಜಿಲ್ಲೆಯ ಬಯಲು ಹಾಗೂ ಮಲೆನಾಡಿನ ಎಲ್ಲಾ ತಾಲ್ಲೂಕುಗಳಲ್ಲೂ ಸೋಮವಾರ ಉತ್ತಮ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆಲವೆಡೆ ಅಬ್ಬರದ ಮಳೆಗೆ ಅನಾಹುತಗಳೂ ಸಂಭವಿಸಿದೆ. ಚಿಕ್ಕಮಗಳೂರು ನಗರದಲ್ಲಿ ಬೆಳಗಿನಿಂದ ಸಂಜೆ ವರೆಗೆ ಮೋಡ ಕವಿದ ವಾತಾವರಣದ ಜೊತೆಗೆ ಆಗಾಗ ತುಂತುರು ಮಳೆಬಿದ್ದಿದೆ. ಸಂಜೆ ವೇಳೆಗೆ ಸಾಧಾರಣ ಪ್ರಮಾಣದಲ್ಲಿ ಸುರಿದಿದೆ.

ಮಳೆಯಿಂದ ಮನೆಗೆ ಹಾನಿ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಮೂಡಿಗೆರೆ ತಾಲೂಕಿನ  ಜಿ.ಹೊಸಳ್ಳಿ ಗ್ರಾಮದಲ್ಲಿ ಲಕ್ಷ್ಮಮ್ಮ ಎಂಬುವವರ ಮನೆಗೆ ಹಾನಿಯಾಗಿದೆ. ಮನೆಯ ಗೋಡೆ ಕುಸಿದ ಪರಿಣಾಮ ಇಡೀ ಮನೆಗೆ ಹಾನಿಯಾಗಿದೆ. ಮನೆಯ ಮೇಲ್ಛಾವಣಿಗೆ ಸ್ಥಳೀಯರು ಪ್ಲಾಸ್ಟಿಕ್ ಹೊದಿಸಿ ನೆರವಿಗೆ ಬಂದಿದ್ದಾರೆ.ಬಯಲಿನ ಕಡೂರು ತಾಲ್ಲೂಕಿನಲ್ಲೂ ಉತ್ತಮ ಮಳೆ ಆಗುತ್ತಿದ್ದು, ತಾಲ್ಲೂಕಿನ ಚೌಳಹಿರಿಯೂರು ಗ್ರಾಮದಲ್ಲಿಲ್ಲಿ ತೆಂಗಿನ ತೋಟವೊಂದರಲ್ಲಿ ಎರಡು ಅಡಿಯಷ್ಟು ನೀರು ನಿಂತಿದೆ. ಬೀರೂರು, ಅಜ್ಜಂಪುರ, ತರೀಕೆರೆ ಭಾಗದಲ್ಲಿ ಮಳೆ ಸುರಿದಿದೆ.

ಕೇರಳದಲ್ಲಿ ವೆಸ್ಟ್‌ನೈಲ್ ಜ್ವರ ಹೆಚ್ಚಳ: ಚಾಮರಾಜನಗರ ಚೆಕ್‌ ಪೋಸ್ಟ್‌ನಲ್ಲಿ ಹೈ ಅಲರ್ಟ್‌!

ಘಾಟ್ ನಲ್ಲಿ ಟ್ರಾಫಿಕ್ ಜಾಮ್: ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಇಂದು  ಭಾರೀ ಮಳೆಯಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ. ಟ್ರಾಫಿಕ್ ಜಾಮ್ನಿಂದ ಕಿಲೋ ಮೀಟರ್ ವರೆಗೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

ವಿದ್ಯುತ್ ಸಂಪರ್ಕ ಕಡಿತ: ಮಳೆಯ ಅಬ್ಬರಕ್ಕೆ ಕೊಪ್ಪ ತಾಲ್ಲೂಕಿನ ಜಯಪುರದ ಜನರು ತತ್ತರಿಸಿದ್ದಾರೆ. ಪಟ್ಟಣದ ಸುತ್ತ ಮುತ್ತ ಭಾರೀ ಮಳೆಯಾಗಿದೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಗೊಂಡಿದೆ. ಹಳ್ಳ ಕೊಳ್ಳಗಳಲ್ಲಿ ಭಾರೀ ನೀರು ಹರಿದಿದೆ. ಮಳೆಯ ಆರ್ಭಟಕ್ಕೆ ವಾಹನಗಳು ನಿಂತಲ್ಲೇ ನಿಲ್ಲುವಂತಾಗಿದೆ.ರಾತ್ರಿ ನಿರಂತರ ಸುರಿದ ಮಳೆಯಿಂದ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಗುಲಾಬಿ ಎಂಬ ಒಂಟಿ ಮಹಿಳೆಯ ಮನೆ ಕುಸಿತಕ್ಕೊಳಗಾಗಿದೆ. ಆಕೆ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇದ್ದ ಒಂದು ಮನೆಯೂ ಗಾಳಿ ಮಳೆಯಿಂದ ಮುರಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿರ್ಗತಿಕ ಮಹಿಳೆಗೆ ಸ್ಥಳೀಯರು ಸಹಾಯ ಮಾಡಿದ್ದಾರೆ.

ಕೆಆರ್‌ಎಸ್ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಳ: ರೈತರಿಗೆ ಸಂತಸ

ಬಯಲುಸೀಮೆಯಲ್ಲೂ ಮಳೆಯ ಅಬ್ಬರ: ಇತ್ತ ಬಯಲಿನ ತರೀಕೆರೆ ಪಟ್ಟಣದಲ್ಲಿ ಅರ್ಧಗಂಟೆ ನಿರಂತರ ಮಳೆ ಸುರಿದಿದೆ. ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಯಲ್ಲಿ ಸುಮಾರು ಒಂದೂವರೆ ಅಡಿ ನೀರು ನಿಂತಿದೆ. ಆಟೋ-ಕಾರಿನ ಚಕ್ರಗಳು ಅರ್ಧದಷ್ಟು ಮುಳುಗುವಂತಾಗಿದೆ. ಬಯಲಿನ ಕಡೂರು, ಬೀರೂರು, ತರೀಕೆರೆ, ಅಜ್ಜಂಪುರ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ರೈತಾಪಿ ಜನರು ಸಂತಸಗೊಂಡಿದ್ದಾರೆ.

PREV
Read more Articles on
click me!

Recommended Stories

ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌