‘ರೈತ ರತ್ನ’ ಪುರಸ್ಕೃತ ಬಸವರಾಜ ಕೊರೋನಾದಿಂದ ನಿಧನ

By Kannadaprabha NewsFirst Published May 2, 2021, 7:54 AM IST
Highlights

ಸುಸ್ಥಿರ ಕೃಷಿಯಲ್ಲಿ ತೊಡಗಿಕೊಳ್ಳುವ ಮೂಲಕ ರೈತರಿಗೆ ಮಾದರಿಯಾಗಿದ್ದ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಾಹಿನಿ ಹಾಗೂ ಕನ್ನಡಪ್ರಭ ಕೊಡ ಮಾಡಿದ ರೈತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದ ಬಸವರಾಜ ವಿಭೂತಿ ಕೊರೋನಾದಿಂದ ಮೃತಪಟ್ಟಿದ್ದಾರೆ. 

ಧಾರವಾಡ (ಮೇ.02): ಇಳಿ ವಯಸ್ಸಿನಲ್ಲೂ ಸುಸ್ಥಿರ ಕೃಷಿಯಲ್ಲಿ ತೊಡಗಿಕೊಳ್ಳುವ ಮೂಲಕ ರೈತರಿಗೆ ಮಾದರಿಯಾಗಿದ್ದ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಾಹಿನಿ ಹಾಗೂ ಕನ್ನಡಪ್ರಭ ಕೊಡ ಮಾಡಿದ ರೈತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದ ಬಸವರಾಜ ವಿಭೂತಿ(83) ಕೊರೋನಾ ಸೋಂಕಿಗೆ ಶನಿವಾರ ವಿಧಿವಶವಾಗಿದ್ದಾರೆ. 

80ರ ವಯಸ್ಸಲ್ಲೂ ಕುಗ್ಗದ ಆಸಕ್ತಿ: ವರ್ಷಕ್ಕೆ 40 ಲಕ್ಷ ಆದಾಯ ಗಳಿಸುವ ರೈತ ...

ಧಾರವಾಡದ ಕಲ್ಯಾಣನಗರದ ನಿವಾಸಿಯಾಗಿದ್ದ ಇವರಿಗೆ ಸೋಂಕು ತಗುಲಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದರು.

ಒಂದೇ ತಿಂಗಳಲ್ಲಿ 3 ಲಕ್ಷ ಮಂದಿಗೆ ಸೋಂಕು: ಬೆಚ್ಚಿ ಬಿದ್ದ ಬೆಂಗ್ಳೂರು..! ...

 ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರು ಹೊನ್ನಾಪೂರದಲ್ಲಿ 20 ಎಕರೆ ಪ್ರದೇಶದಲ್ಲಿ ಅತ್ಯದ್ಭುತವಾಗಿ ಸಮಗ್ರ ಕೃಷಿಯಲ್ಲಿ ತೊಡಗಿದ್ದು ಹೊಸ ಹೊಸ ಕೃಷಿ ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!