ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

Published : Sep 07, 2023, 08:36 PM IST
ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಸಾರಾಂಶ

ಹಳುವಳ್ಳಿ, ಮತ್ತಿಕೆರೆ ಹಳ್ಳದಿಂದ ಆರಂಭವಾದ ಬೈಕ್ ಜಾಥಾ  ಮಳಲೂರು, ಶಕ್ತಿನಗರ, ರಾಂಪುರ, ಐಜಿ ರಸ್ತೆ, ಹನುಮಂತಪ್ಪ ವೃತ್ತ, ಎಂಜಿ ರಸ್ತೆ ಮೂಲಕ ಸಾಗಿ ಆಜಾದ್ ಪಾರ್ಕಿನಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಹಸಿರು ಶಾಲು ಧರಿಸಿ ಭಾಗವಹಿಸಿದ್ದ ಹತ್ತಾರು ಹಳ್ಳಿಯ ಜನ ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದ ರಾಜಕಾರಣಿಗಳು ಮತ್ತು  ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು(ಸೆ.07):  ಚಿಕ್ಕಮಗಳೂರು ತಾಲೂಕಿನ ಮಳಲೂರು ಏತ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಇಂದು(ಗುರುವಾರ) ಚಿಕ್ಕಮಗಳೂರು ನಗರದಲ್ಲಿ ಬೈಕ್ ಜಾಥಾ ನಡೆಸಿ ಪ್ರತಿಭಟಿಸಿದರು. 

ಹಳುವಳ್ಳಿ, ಮತ್ತಿಕೆರೆ ಹಳ್ಳದಿಂದ ಆರಂಭವಾದ ಬೈಕ್ ಜಾಥಾ  ಮಳಲೂರು, ಶಕ್ತಿನಗರ, ರಾಂಪುರ, ಐಜಿ ರಸ್ತೆ, ಹನುಮಂತಪ್ಪ ವೃತ್ತ, ಎಂಜಿ ರಸ್ತೆ ಮೂಲಕ ಸಾಗಿ ಆಜಾದ್ ಪಾರ್ಕಿನಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಹಸಿರು ಶಾಲು ಧರಿಸಿ ಭಾಗವಹಿಸಿದ್ದ ಹತ್ತಾರು ಹಳ್ಳಿಯ ಜನ ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದ ರಾಜಕಾರಣಿಗಳು ಮತ್ತು  ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್: ಇಬ್ಬರ ಸ್ಥಿತಿ ಗಂಭೀರ

1998ರಲ್ಲಿ ಆರಂಭವಾದ ಯೋಜನೆ : 

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಮಾತನಾಡಿ, ಕೆ.ಆರ್.ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಹಳ್ಳಿಗಳ 1600 ಕ್ಕೂ ಹೆಚ್ಚು ರೈತರ ಜಮೀನಿಗೆ ನೀರುಣಿಸುವ ಮಳಲೂರು ಏತ ನೀರಾವರಿ ಯೋಜನೆ 1998 ರಲ್ಲಿ ಆರಂಭವಾದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.1998 ರಲ್ಲಿ ಸರಕಾರದ ಅನುಮೋದನೆ ದೊರೆತು 2000ನೇ ಸಾಲಿನಲ್ಲಿ ಶಂಕು ಸ್ಥಾಪನೆಯಾಗಿ ಆರಂಭಿಕ 2.58 ಕೋಟಿರೂ ವೆಚ್ಚದಲ್ಲಿ ಯೋಜನೆ ಆರಂಭಿಸಿದ್ದು ಇಲ್ಲಿಯವರೆಗೆ ಯೋಜನಾ ವೆಚ್ಚ ಹೆಚ್ಚಾಯಿತೆ ವಿನಾಃ ಯೋಜನೆ ಪೂರ್ಣಗೊಳ್ಳಲಿಲ್ಲಎಂದು ದೂರಿದರು.ಅನೇಕ ಪಕ್ಷಗಳು, ಜನಪ್ರತಿನಿಗಳು ಬದಲಾದರೇ ಹೊರತು ಕಾಮಗಾರಿ ಪೂರ್ಣಗೊಳಿಸಿ ರೈತರ ಹೊಲಗದ್ದೆಗಳಿಗೆ ನೀರು ಕೊಡಲು ಯಾವ  ಜನಪ್ರತಿನಿಗಳು ಇಚ್ಛಾಶಕ್ತಿ ತೋರಲಿಲ್ಲ ಎಂದು ಆರೋಪಿಸಿದರು.

ಜನಪ್ರತಿನಿಧಿಗಳು ವಿರುದ್ಧ ಆಕ್ರೋಶದ ಕಿಡಿ : 

ರೈತ ಸಂಘದ ಗೌರವಾಧ್ಯಕ್ಷ ಕೆ.ಕೆ.ಕೃಷ್ಣೇಗೌಡ ಮಾತನಾಡಿ ಕಳೆದ 23 ವರ್ಷದಿಂದ ಒಂದು ಸಣ್ಣ ಯೋಜನೆ ಪೂರ್ಣಗೊಳಿಸದ ರಾಜಕಾರಣಿಗಳಿಗೆ ನಾಚಿಕೆ ಆಗಬೇಕು. ಒಂದು ತಿಂಗಳು ಗಡುವು ನೀಡುತ್ತೇವೆ ಯೋಜನೆ ಕೈಗೆತ್ತಿಕೊಳ್ಳದಿದ್ದರೆ ಮೂಡಿಗೆರೆ ಶಾಸಕರ ಮನೆ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದರು.ಸಂಘದ ಕಾರ್ಯದರ್ಶಿ ಬಿ.ಡಿ.ಮಹೇಶ್ ಮಾತನಾಡಿದರು. ರೈತ ಮುಖಂಡರಾದ ಬಸವರಾಜು. ಮಂಜುನಾಥ, ಚಂದ್ರಶೇಖರ, ಲೋಕೇಶ ಮತ್ತಿತರರಿದ್ದರು.

PREV
Read more Articles on
click me!

Recommended Stories

ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!