'ಬಿಜೆಪಿ ಸರ್ಕಾರ ರೈತರ ಕಣ್ಣೀರು ಒರೆಸುವ ಕಾರ್ಯ ಮಾಡಿದೆ'

Kannadaprabha News   | Asianet News
Published : Jul 12, 2021, 12:39 PM IST
'ಬಿಜೆಪಿ ಸರ್ಕಾರ ರೈತರ ಕಣ್ಣೀರು ಒರೆಸುವ ಕಾರ್ಯ ಮಾಡಿದೆ'

ಸಾರಾಂಶ

* ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿಯ ದೃಷ್ಟಿಯಲ್ಲಿ ಹಿಂದೆ ಬಿದ್ದಿಲ್ಲ * ರೈತರ ಹಿತ ಕಾರ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ನಾವು ಬುದ್ಧಿ ಕಲಿಯಬೇಕಿಲ್ಲ  * ರಾಜ್ಯದಲ್ಲಿನ ಪ್ರತಿಯೊಬ್ಬ ರೈತನ ಖಾತೆಗೆ 10 ಸಾವಿರ ಹಣ ಹಾಕುತ್ತಿರುವ ಬಿಜೆಪಿ ಸರ್ಕಾರ

ಲಕ್ಷ್ಮೇಶ್ವರ(ಜು.12): ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಕಾಯುವ ನಿಟ್ಟಿನಲ್ಲಿ ಹಲವು ಮಹತ್ವದ ಕಾಯಿದೆಗಳನ್ನು ಜಾರಿಗೆ ತಂದಿದೆ. ರೈತರ ಕಣ್ಣೀರು ಒರೆಸುವ ಕಾರ್ಯದಲ್ಲಿ ಬಿಜೆಪಿ ಹಿಂದೆ ಬಿದ್ದಿಲ್ಲ ಎಂದು ಗದಗ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರಾಜಣ್ಣ ಕುಲಕರ್ಣಿ ಹೇಳಿದ್ದಾರೆ. 

ಶನಿವಾರ ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ಸಿಗೆ ಮಾರಕವಾದ ಜಿಪಂ ಮೀಸಲಾತಿ ನಿಗದಿ..!

ರೈತರು ದೇಶದ ಬೆನ್ನೆಲುಬು ಎನ್ನುವುದನ್ನು ಅರಿತ ಕೇಂದ್ರದ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯದಲ್ಲಿನ ಪ್ರತಿಯೊಬ್ಬ ರೈತನ ಖಾತೆಗೆ 10 ಸಾವಿರ ಹಣ ಹಾಕುತ್ತಿದೆ. ಇದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿಯ ದೃಷ್ಟಿಯಲ್ಲಿ ಹಿಂದೆ ಬಿದ್ದಿಲ್ಲ, ರೈತರ ಹಿತ ಕಾರ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ನಾವು ಬುದ್ದಿ ಕಲಿಯಬೇಕಿಲ್ಲ ಎಂದರು.

ಈ ವೇಳೆ ಉಪಾಧ್ಯಕ್ಷ ಪ್ರಭು ಅಬ್ಬಿಗೇರಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಇಟಗಿ, ರಮೇಶ ಹಾಳದೋಟದ, ಗಂಗಾಧರ ಮೆಣಸಿನಕಾಯಿ, ಮಂಜನಗೌಡ ಕೆಂಚನಗೌಡ್ರ, ಹನಮಂತ ಭರಮಣ್ಣವರ, ಚನ್ನವೀರಪ್ಪ ಹೂಗಾರ, ಪ್ರಕಾಶ ಹೊಸಮನಿ, ರವಿರೆಡ್ಡಿ ಧನ್ನೂರ, ಮುತ್ತಣ್ಣ ಚೊಟಗಲ್ಲ, ಮಂಜುನಾಥ ಉಳ್ಳಾಗಡ್ಡಿ ಇದ್ದರು.
 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ