ನನ್ನನ್ನು ಆಯ್ಕೆ ಮಾಡಿದ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಜೊತೆಗೆ ರಾಜ್ಯ ಮತ್ತು ರಾಷ್ಟ್ರಮಟದ ಎಲ್ಲ ನಾಯಕರಿಗೆ ಕೃತಜ್ಞನಾಗಿದ್ದೇನೆ: ಈರಣ್ಣ ಕಡಾಡಿ| ನಮ್ಮ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ದೇಶದ ಉನ್ನತ ಹುದ್ದೆ ಸ್ವೀಕರಿಸಬಹುದು. ಅದಕ್ಕೆ ಉದಾಹರಣೆ ಈರಣ್ಣ ಕಡಾಡಿಯವರೆ ಸಾಕ್ಷಿ|
ಸವದತ್ತಿ(ಜೂ.21): ರಾಜ್ಯ ಬಿಜೆಪಿಯಲ್ಲಿ ನಾನು ಕಳೆದ ಮೂರು ದಶಕಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಗಮನಿಸಿ ರಾಜ್ಯಸಭಾ ಸದಸ್ಯನನ್ನಾಗಿ ಮಾಡುವುದರ ಮೂಲಕ ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪರವಾಗಿ ಇದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಇದೆ ಮೊದಲ ಬಾರಿಗೆ ಶನಿವಾರ ಪಟ್ಟಣಕ್ಕೆ ಆಗಮಿಸಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿಯವರ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನ್ನನ್ನು ಆಯ್ಕೆ ಮಾಡಿದ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿಯರ ಜೊತೆಗೆ ರಾಜ್ಯ ಮತ್ತು ರಾಷ್ಟ್ರಮಟದ ಎಲ್ಲ ನಾಯಕರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ
ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ನಮ್ಮ ಪಕ್ಷದಲ್ಲಿ ಸಮಾನ್ಯ ಕಾರ್ಯಕರ್ತ ದೇಶದ ಉನ್ನತ ಹುದ್ದೆ ಸ್ವೀಕರಿಸಬಹುದು. ಅದಕ್ಕೆ ಉದಾಹರಣೆ ಈರಣ್ಣ ಕಡಾಡಿಯವರೆ ಸಾಕ್ಷಿ ಎಂದು ಹೇಳಿದರು. ಬರುವ ದಿನಗಳಲ್ಲಿ ಕೇಂದ್ರದಿಂದ ಹೆಚ್ಚಿನ ಅನುದಾನ ತರುವ ಮುಲಕ ರಾಜ್ಯ ಮತ್ತು ಬೆಳಗಾವಿ ಜಿಲ್ಲೆಯನ್ನು ಇನ್ನೂ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಚಂದರಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಜಗದೀಶ ಶಿಂತ್ರಿ, ಎಪಿಎಂಸಿ ಅಧ್ಯಕ್ಷ ಪ್ರಕಾಶ ನರಿ, ಜಗದೀಶ ಹನಸಿ, ಸಿ.ಎಸ್.ಪಟ್ಟಣಶೆಟ್ಟಿ, ಬಸವರಾಜ ಕಾರದಗಿ, ಶಿವಾನಂದ ಹೂಗಾರ, ಜಗದೀಶ ಕೌಜಗೇರಿ, ಚಂದ್ರು ಜಂಬ್ರಿ, ರಾಜು ಸಾಲಿಮಠ, ಶಿವಾನಂದ ಪಟ್ಟಣಶೆಟ್ಟಿ, ಇತರರು ಉಪಸ್ಥಿತರಿದ್ದರು.