ಸುವರ್ಣ ನ್ಯೂಸ್‌ ನವೀನ್‌ಗೆ ರಾಜ್ಯೋತ್ಸವ ಪ್ರಶಸ್ತಿ: ಫಲಕ ಕೊಟ್ಟು ಗೌರವಿಸಿದ ಸಚಿವ ಮಹದೇವಪ್ಪ

By Sathish Kumar KH  |  First Published Nov 1, 2024, 8:42 PM IST

ಮೈಸೂರು ಜಿಲ್ಲಾ ಛಾಯಾಗ್ರಾಹಕ ಜಿ. ನವೀನ್ ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ. ಸಚಿವ ಹೆಚ್.ಸಿ. ಮಹದೇವಪ್ಪ ಪ್ರಶಸ್ತಿ ನೀಡಿ ಗೌರವಿಸಿದರು. 


ಮೈಸೂರು (ನ.01): ಮೈಸೂರು ಜಿಲ್ಲೆಯಲ್ಲಿ ಮಾಧ್ಯಮ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಮೈಸೂರು ಜಿಲ್ಲಾ ಛಾಯಾಗ್ರಾಹಕ ಜಿ. ನವೀನ್ ಕುಮಾರ್ ಅವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸಚಿವ ಹೆಚ್.ಸಿ. ಮಹದೇವಪ್ಪ ಅವರು ಪ್ರದಾನ ಮಾಡಿ ಗೌರವಿಸಿದರು.

ದೇಶದಲ್ಲಿ 1956ರ ನ.1ರಂದು ಕರ್ನಾಟಕ ರಾಜ್ಯ ಉದಯವಾದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಪ್ರತಿ ವರ್ಷ ರಾಜ್ಯಮಟ್ಟದಲ್ಲಿ ಹಾಗೂ ಆಯಾ ಜಿಲ್ಲಾ ಮಟ್ಟದಲ್ಲಿ ಕನ್ನಡದ ಸೇವೆ ಮಾಡಿದವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅದೇ ರೀತಿ ಮೈಸೂರು ಜಿಲ್ಲಾ ಮಟ್ಟದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಮೈಸೂರು ಜಿಲ್ಲಾ ಛಾಯಾಗ್ರಾಹಕ ಜಿ. ನವೀನ್ ಕುಮಾರ್ ಭಾಜನರಾಗಿದ್ದರು.

Tap to resize

Latest Videos

undefined

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ವೇಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವು ಗಣ್ಯರು ಸುವರ್ಣ ನ್ಯೂಸ್ ಕ್ಯಾಮೆರಾಮೆನ್ ನವೀನ್ ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಉಳಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಯಾವ ಭಾಷೆಗೂ ಇಲ್ಲದ ಕಾವಲು ಸಮಿತಿಯನ್ನು ಕನ್ನಡಕ್ಕೆ ರಚಿಸಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ!

ಭುವನೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ:
ಭಾರತದ ಸ್ವಾತಂತ್ರ್ಯ ನಂತರ ಭಾಷೆಗೆ ಅನುಗುಣವಾಗಿ ಪ್ರದೇಶಗಳನ್ನು ಗುರುತಿಸಿ 1956ರಲ್ಲಿ ಮೈಸೂರು ರಾಜ್ಯವನ್ನು ಸ್ಥಾಪಿಸಲಾಯಿತು. ನಂತರ ಮೈಸೂರು ರಾಜ್ಯ ಎಂಬುದನ್ನು 1973ರಲ್ಲಿ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಆದರೆ, ಇಡೀ ರಾಜ್ಯಕ್ಕೆ ಮೈಸೂರು ರಾಜ್ಯ ಎಂದು ಹೆಸರು ಬರಲು ಕಾರಣವಾಗಿದ್ದ ಮೈಸೂರು ರಾಜ ಮನೆತನಕ್ಕೆ ಎಲ್ಲರೂ ಒಂದೊಮ್ಮೆ ನಮಿಸಲೇಬೇಕು. ಇನ್ನು ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಆವರಣದಲ್ಲಿರುವ ಭುವನೇಶ್ವರಿ ದೇವಿಗೆ ಜಿಲ್ಲಾಡಳಿತದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ‌ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು‌.

ನಂತರ, ಭುವನೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ಮಾಡಲು ಸಿದ್ಧತೆ ಮಾಡಲಾಯಿತು. ಭುವನೇಶ್ವರಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಚಾಲನೆ ನೀಡಲಾಯಿತು. ಮೈಸೂರು ಅರಮನೆ ಆವರಣದ ಭುವನೇಶ್ವರಿ ದೇವಿ ದೇವಸ್ಥಾನದಿಂದ ಓವಲ್ ಮೈದಾನದವರೆಗೆ ಮೆರವಣಿಗೆ ಮಾಡಲಾಯಿತು. ಬಳಿಕ ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಗೆ ಗಣ್ಯರು ತೆರಳಿ, ಕನ್ನಡ ಧ್ವಜಾರೋಹಣ ನೆರವೇರಿಸಿದರು. ನಂತರ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

click me!