ವಾಡಾ ಅಧ್ಯಕ್ಷ ಸ್ಥಾನ ನಾನೊಲ್ಲೆ: ಸಿಎಂ ಬಿಎಸ್‌ವೈಗೆ ಪತ್ರ ಬರೆದ ಬಿಜೆಪಿ ಮುಖಂಡ

By Kannadaprabha NewsFirst Published Feb 3, 2021, 12:53 PM IST
Highlights

ವಾಡಾ ಅಧ್ಯಕ್ಷ ಸ್ಥಾನ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಕೊಡಿ| ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ| ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ| ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷ ಸಂಘಟಿಸಲು ಸಾಕಷ್ಟು ಶ್ರಮಿಸಿದ್ದೇನೆ| ವ್ಯಕ್ತಿನಿಷ್ಠನಾಗದೆ ಪಕ್ಷ ನಿಷ್ಠನಾಗಿ ಕಾರ್ಯನಿರ್ವಹಿಸಿದ್ದೇನೆ:ರಾಮಲಿಂಗಪ್ಪ| 

ಬಳ್ಳಾರಿ(ಫೆ.03): ಬುಡಾ ಅಧ್ಯಕ್ಷ ಸ್ಥಾನ ತೆರವುಗೊಳಿಸಿ ನೀಡಿರುವ ವಿಜಯನಗರ ಅಭಿವೃದ್ಧಿ ಪ್ರಾಧಿಕಾರ (ವಾಡಾ) ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಲು ನಯವಾಗಿ ನಿರಾಕರಿಸಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎ. ರಾಮಲಿಂಗಪ್ಪ ಅವರು, ವಾಡಾ ಅಧ್ಯಕ್ಷ ಸ್ಥಾನವನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಕೆ.ಎ. ರಾಮಲಿಂಗಪ್ಪ, ‘ತಮ್ಮ ಆದೇಶದಂತೆ ಬುಡಾ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡೆ. ಅದಾದ ಬಳಿಕದ ದಿಢೀರ್‌ ಬೆಳವಣಿಗೆಯಲ್ಲಿ ನನ್ನನ್ನು ಬುಡಾ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಿ ವಾಡಾ ಅಧ್ಯಕ್ಷರನ್ನಾಗಿ ನೇಮಿಸಿದ್ದೀರಿ. ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟಿಸಲು ಸಾಕಷ್ಟು ಶ್ರಮಿಸಿದ್ದೇನೆ. ವ್ಯಕ್ತಿನಿಷ್ಠನಾಗದೆ ಪಕ್ಷ ನಿಷ್ಠನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಫೆ.5ಕ್ಕೆ ರಾಜ್ಯದ 31ನೇ ನೂತನ ಜಿಲ್ಲೆ ಅಧಿಕೃತ ಘೋಷಣೆ

ಪಕ್ಷ ಹಾಗೂ ಸರ್ಕಾರಕ್ಕೆ ಯಾವುದೇ ಮುಜುಗರವಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ನನ್ನ ಮೇಲಿದ್ದು, ವಾಡಾ ಅಧ್ಯಕ್ಷ ಸ್ಥಾನವನ್ನು ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯನಿರ್ವಸುವ ಕಾರ್ಯಕರ್ತರಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
 

click me!