ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಕಾರಿನಲ್ಲಿ ತೆರಳುತ್ತಿದ್ದ ಸಿಬ್ಬಂದಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ವೋಟಿಂಗ್‌ಗೆ ಬಳಸುವ ಎಲ್ಲ ಪರಿಕರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ರಾಮನಗರ (ಸೆ.27): ರಾಮನಗರ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಕಾರಿನಲ್ಲಿ ತೆರಳುತ್ತಿದ್ದ ಸಿಬ್ಬಂದಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ವೋಟಿಂಗ್‌ಗೆ ಬಳಸುವ ಎಲ್ಲ ಪರಿಕರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತೆರಳುತ್ತಿದ್ದ ಚುನಾವಣಾ ಅಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಚುನಾವಣಾ ಪರಿಕರಗಳನ್ನು ದೋಚಿ ಪರಾರಿ ಆಗಿದ್ದಾರೆ. ಈ ಘಟನೆಯು ಮಾಗಡಿ ಕುಣಿಗಲ್ ರಸ್ತೆಯಲ್ಲಿ ನಡೆದಿದೆ. ಬುಲೇರೊ ವಾಹನದಲ್ಲಿ ತೆರಳುತ್ತಿದ್ದ 5 ಜನ ಚುನಾವಣಾ ಸಿಬ್ಬಂದಿಯನ್ನು ಸ್ಯಾಂಟ್ರೋ ಕಾರಿನಲ್ಲಿ ಬಂದ 5 ಜನರ ತಂಡವು ಅಡ್ಡಗಟ್ಟಿದೆ. ನಂತರ, ನೀವು ಯಾರೆಂದು ಕೇಳಿದಾಗ ಚುನಾವಣಾ ಸಿಬ್ಬಂದಿಯು ಗುರುತಿನ ಚೀಟಿಯನ್ನು ತೋರಿಸಿ ಅಡ್ಡಗಟ್ಟಿರುವುದನ್ನು ಬಿಡುವಂತೆ ತಿಳಿಸಿದ್ದಾರೆ.
ಮಂಡ್ಯ: ನಾಗಮಂಗಲ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ
ಇನ್ನು ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ ತಡೆಯುವ ಉದ್ದೇಶಕ್ಕೆಂದಲೇ ಬಂದಿರುವಂತೆ ಕಾಣಿಸುತ್ತಿದ್ದ ದುಷ್ಕರ್ಮಿಗಳು ಚುನಾವಣಾ ಸಿಬ್ಬಂದಿ ಇವರೇ ಎಂಬುದು ಖಚಿತವಾಗುತ್ತಿದ್ದಂತೆ ಅವರ ಬಳಿಯೊದ್ದ ಎಲ್ಲ ಚುನಾವಣಾ ಸಂಬಂಧಿತ ಪರಿಕರಗಳನ್ನು ಕಿತ್ತುಕೊಂಡು ಪರಾರಿ ಆಗಿದ್ದಾರೆ. ಈ ವೇಳೆ ಐದು ಜನರಲ್ಲಿ ಇಬ್ಬರು ಕಾರನ್ನು ಇಳಿದು ದರೋಡೆ ಮಾಡಿದ್ದಾರೆ. ಆಗ ಪರಿಕರಗಳನ್ನು ಕಿತ್ತುಕೊಳ್ಳಲು ಮುಂದಾದ ದುಷ್ಕರ್ಮಿಗಳನ್ನು ತಡೆಯಲು ಬಂದವರಿಗೆ ಹಲ್ಲೆ ಮಾಡಿದ್ದಾರೆ. ನಂತರ, ಸ್ಯಾಂಟ್ರೋ ಕಾರಿನಲ್ಲಿ ಹತ್ತಿಕೊಂಡು ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಅದರಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡುವ ದೃಶ್ಯ ಹಾಗೂ ಆರೋಪಿಗಳ ಕಾರು ಆಕ್ಸಿಡೆಂಟ್ ಮಾಡಲು ಮುಂದಾದ ದೃಶ್ಯವನ್ನು ವೀಡಿಯೋ ಮಾಡಿದ್ದಾರೆ.
ಈ ಘಟನೆಯಿಂದ ಇಂದು ಬೆಳಗ್ಗೆ ನಡೆಯಬೇಕಿದ್ದ ಹೆಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ಚುನಾವಣೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಈ ಘಟನೆಯು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ, ಚುನಾವಣಾ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಪೊಲಿಸರು ಕೂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಂತರ ಯಾವ ಕಾರಣಕ್ಕೆ ದುಷ್ಕರ್ಮಿಗಳು ಚುನಾವಣಾ ಸಿಬ್ಬಂದಿಯನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ ಎಂಬುದು ತಿಳಿಯಲಿದೆ.
ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಬರಗಾಲ ಫಿಕ್ಸ್: ಬಿ.ವೈ.ರಾಘವೇಂದ್ರ
23 ವರ್ಷದ ಬಳಿಕ ನಡೆಯುತ್ತಿದ್ದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅಟ್ಯಾಕ್: ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ನಿರ್ದೇಶಕರ ಚುನಾವಣೆಯು ಕಳೆದ 23 ವರ್ಷಗಳಿಂದ ನಡೆದಿರಲಿಲ್ಲ. ಇನ್ನು ಸರ್ಕಾರದಿಂದ ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದರಿಂದ ಇಂದು ಚುನಾವಣೆ ನಡೆಯುತ್ತಿತ್ತು. ಆದರೆ, ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಬೆಂಬಲಿಗರ ತಂಡವು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ಕೃತ್ಯವನ್ನು ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಗಡಿ- ಕುಣಿಗಲ್ ರಸ್ತೆಯ ಕೆಂಚನಹಳ್ಳಿ ಬಳಿ ಕಾರು ಅಡ್ಡಗಟ್ಟಿ ಲ್ಯಾಪ್ ಟಾಪ್, ಚುನಾವಣೆಯ ಬ್ಯಾಲೆಟ್ ಪೇಪರ್ ಹಾಗೂ ಇತರೆ ಸಾಮಗ್ರಿಗಳನ್ನು ಕಿತ್ತುಕೊಂಡು ಹೋಗಿದ್ದಾರೆ.