ನಿಖಿಲ್ ಕುಮಾರಸ್ವಾಮಿಗೆ ಕ್ಷಮೆಯಾಚಿಸಿದ ಕಾಂಗ್ರೆಸ್ ಕಾರ್ಯಕರ್ತರು; ದೇಗುಲ ಪ್ರವೇಶ ನಿರಾಕರಣೆಗೆ ಕೇಸಿಗೆ ಟ್ವಿಸ್ಟ್!

Published : Nov 17, 2026, 05:35 PM IST
Nikhil Kumaraswamy Congress Activists

ಸಾರಾಂಶ

ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರವೇಶ ನಿರಾಕರಣೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದೇವಾಲಯಕ್ಕೆ ಬೀಗ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿ ನಿಖಿಲ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ರಾಮನಗರ (ನ.17): ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಿಸಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೇವಾಲಯಕ್ಕೆ ಬೀಗ ಹಾಕಿದ್ದರು ಎನ್ನಲಾದ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಸ್ವತಃ ದೇಗುಲದ ಮುಂದೆಯೇ ನಿಂತು ನಿಖಿಲ್ ಕುಮಾರಸ್ವಾಮಿ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಬೀಗ ಹಾಕಿಲ್ಲ: ಕಾರ್ಯಕರ್ತರ ಸ್ಪಷ್ಟನೆ

ಘಟನೆಯ ಕುರಿತು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅನಿಲ್ ಮತ್ತು ರವಿ ಅವರು ದೇವಾಲಯದ ಮುಂಭಾಗದಲ್ಲಿ ನಿಂತು ಸ್ಪಷ್ಟನೆ ನೀಡಿದ್ದಾರೆ. "ನಾವು ಉದ್ದೇಶಪೂರ್ವಕವಾಗಿ ದೇವಾಲಯದ ಗೇಟ್‌ಗೆ ಬೀಗ ಹಾಕಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಬರುವುದಕ್ಕೂ ಮುನ್ನ ಕರೆಂಟ್ ಹೋಗಿತ್ತು. ಇದೇ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಆಯೋಜಕರ ಮೇಲೆ ಮುಗಿಬಿದ್ದು ಹಲ್ಲೆ ಮಾಡಲು ಬಂದರು. ಅವರಿಂದ ರಕ್ಷಣೆ ಪಡೆಯಲು ನಾವು ದೇವಾಲಯದ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದೆವು" ಎಂದು ಅವರು ಅಂದಿನ ಘಟನೆಯನ್ನು ವಿವರಿಸಿದ್ದಾರೆ.

ಯಾವುದೇ ರಾಜಕೀಯ ದುರುದ್ದೇಶ ಇಲ್ಲ; ನಿಖಿಲ್‌ಗೆ ಸ್ವಾಗತದ ಭರವಸೆ

"ಈ ಘಟನೆಯಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಆದರೂ ನಡೆದಿರುವ ಘಟನೆಗೆ ನಿಖಿಲ್ ಕುಮಾರಸ್ವಾಮಿ ಅವರಲ್ಲಿ ನಾವು ಕ್ಷಮೆಯಾಚಿಸುತ್ತಿದ್ದೇವೆ. ಮುಂದೆ ನಿಖಿಲ್ ಅವರು ಯಾವಾಗ ಗ್ರಾಮಕ್ಕೆ ಬಂದರೂ ನಾವೇ ಅವರನ್ನು ಸ್ವಾಗತ ಮಾಡುತ್ತೇವೆ. ಈ ಘಟನೆಗಾಗಿ ರಾಜ್ಯದ ಜನತೆಯೂ ನಮಗೆ ಕ್ಷಮೆ ನೀಡಬೇಕು" ಎಂದು ಅನಿಲ್ ಹಾಗೂ ರವಿ ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ವೇಳೆ ಗಲಾಟೆ ನಡೆದಿತ್ತು. ನಿಖಿಲ್ ಕುಮಾರಸ್ವಾಮಿ ಭೇಟಿ ಸಂದರ್ಭದಲ್ಲಿ ದೇವಾಲಯಕ್ಕೆ ಬೀಗ ಹಾಕಿ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಘಟನೆಗೆ ಸ್ಪಷ್ಟನೆ ನೀಡಿ ಕ್ಷಮೆ ಕೋರಿದ್ದಾರೆ.

PREV
Read more Articles on
click me!

Recommended Stories

ಸೈಬೀರಿಯಾದಿಂದ 6000 ಕಿ.ಮೀ. ಹಾರಿಬಂದ ಪುಟ್ಟ ಅತಿಥಿ, ವಿಜಯನಗರದ ಉಲವತ್ತಿಯಲ್ಲಿ ಅಪರೂಪದ ಕಂದು ಕಾಳಿಂಗ ಪ್ರತ್ಯಕ್ಷ!
Gadag: ಗ್ರಾಮಸ್ಥರ ಮನೆ ಬಾಗಿಲಿಗೆ ಉಚಿತ ಕಾನೂನು ನೆರವು, ಹಳ್ಳಿಗಾಡಿನ ಜನರಿಗಾಗಿ ಗ್ರಾಮ ಕಾನೂನು ಸೇವಾ ಕ್ಲಿನಿಕ್