ಡಿಕೆ ಸಹೋದರರ ನಾಡಲ್ಲಿ ಶೀಘ್ರವೇ ಚುನಾವಣೆ ನಡೆಯಲಿದ್ದು, ಚುನಾವಣೆಗೆ ದಿನಾಂಕ ಕೂಡ ಫಿಕ್ಸ್ ಆಗಿದೆ. ಯಾವ ಚುನಾವಣೆ..? ಯಾವಾಗ ನಡೆಯಲಿದೆ?
ರಾಮನಗರ(ಸೆ.01): ಜಿಲ್ಲಾ ಪಂಚಾಯತಿ ಅಧ್ಯಕ್ಷರ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನವು ಬಸಪ್ಪ ಅವರ (ಆಗಸ್ವ್ 25 ರಿಂದ) ರಾಜೀನಾಮೆ ಕಾರಣದಿಂದ ಖಾಲಿ ಇದೆ. ಈ ಹಿನ್ನೆಲೆಯಲ್ಲಿ ಸೆ. 10 ರಂದು ಮಧ್ಯಾಹ್ನ 12 ಗಂಟೆಗೆ ರಾಮನಗರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಭೆ ನಡೆಯಲಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ… ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಮತ್ತೊಂದು ಚುನಾವಣೆ: ಮೀಸಲಾತಿ ಪ್ರಕಟ...
ನಾಮಪತ್ರ ಸಲ್ಲಿಕೆ : ಅಧ್ಯಕ್ಷರ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸದಸ್ಯರು ಸೆ. 10 ರಂದು ಬೆಳಿಗ್ಗೆ 9 ರಿಂದ 10 ಗಂಟೆಯ ಒಳಗಾಗಿ ಇಲ್ಲವೆ ಸಭೆ ನಡೆಯುವ ಎರಡು ಗಂಟೆಗಳಿಗೆ ಕಡಿಮೆ ಇಲ್ಲದಂತೆ ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಂದ ಅಧಿಕೃತಗೊಳಿಸಿರುವ ರಾಮನಗರದ ಅಪರ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಬಹುದು.
ನಾಮಪತ್ರ ಪರಿಶೀಲನೆ : ಸಭೆಯು ಆರಂಭಗೊಅಡ ಬಳಿಕ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಪರಿಶೀಲನೆಯ ಬಳಿಕ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಬಹುದಾಗಿದೆ. ಸೂಚನೆಯ ಪರವಾಗಿ ಮತ್ತು ವಿರುದ್ಧವಾಗಿ ನೀಡುವ ಮತಗಳನ್ನು ಕೈಭಿ ಎತ್ತುವ ಮೂಲಕ ದಾಖಲು ಮಾಡಿಕೊಳ್ಳಲಾಗುವುದು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.