ದಕ್ಷಿಣ ಕನ್ನಡ: ಧರ್ಮಾಧಾರಿತ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸುವಂತೆ ರಮಾನಾಥ ರೈ ಆಗ್ರಹ

By Kannadaprabha News  |  First Published May 27, 2023, 5:40 AM IST

ದ.ಕ. ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಎಲ್ಲ ಧರ್ಮಾಧಾರಿತ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.


ಮಂಗಳೂರು (ಮೇ.27) :

ದ.ಕ. ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಎಲ್ಲ ಧರ್ಮಾಧಾರಿತ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Tap to resize

Latest Videos

ಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ರಾಜಕೀಯ ಹತ್ಯೆಗಳಲ್ಲಿ ಶರತ್‌ ಮಡಿವಾಳ, ಅಶ್ರಫ್‌, ಜಲೀಲ್‌, ಮಸೂದ್‌, ಪ್ರವೀಣ್‌ ನೆಟ್ಟಾರು ಸೇರಿ ಅನೇಕ ಮಂದಿ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಈ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರಲ್ಲಿ ಬಿಜೆಪಿ ಮತ್ತು ಎಸ್‌ಡಿಪಿಐ ಪಕ್ಷಗಳ ಕಾರ್ಯಕರ್ತರು ಇರಬಹುದು. ಆದರೆ ಒಬ್ಬನೇ ಒಬ್ಬ ಕಾಂಗ್ರೆಸ್‌ ಕಾರ್ಯಕರ್ತ ಇಲ್ಲ ಎಂದು ನಾನು ಅನೇಕ ಬಾರಿ ಪುನರುಚ್ಚರಿಸಿದ್ದೇನೆ. ಇದನ್ನು ಕೂಡ ಗಂಭೀರವಾಗಿ ಪರಿಗಣಿಗಬೇಕಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶರತ್ ಹತ್ಯೆ ಪ್ರಕರಣ: ರಮಾನಾಥ್ ರೈಯಿಂದ ದೂರು!

ಇಂಥ ಹತ್ಯೆಗಳ ಹಿಂದೆ ಯಾವ ಮತೀಯ ಸಂಘಟನೆಗಳಿವೆ? ಇದರ ಹಿಂದಿರುವ ವ್ಯಕ್ತಿಗಳು ಯಾರು ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಬರಬೇಕು. ಆಗ ಮಾತ್ರ ದ.ಕ.ಜಿಲ್ಲೆಯಲ್ಲಿ ರಾಜಕೀಯ ಹತ್ಯೆಗಳು ಕೊನೆಗೊಂಡು ಸಾಮಾಜಿಕ ಸಾಮರಸ್ಯ ಉಳಿಯುತ್ತದೆ. ಈ ಕಾರಣಕ್ಕೆ ಎಸ್‌ಐಟಿ ರಚಿಸಿ, ದಕ್ಷ ಅಧಿಕಾರಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಮಾನನಷ್ಟಮೊಕದ್ದಮೆ ದಾಖಲಿಸಲು ಕಾಂಗ್ರೆಸ್‌ ಜಿಲ್ಲಾ ಘಟಕ ಮುಂದಾಗಿದೆ. ಅವರ ಹೇಳಿಕೆ ಕುರಿತು ತನಿಖೆ ನಡೆಸಬೇಕು, ತಪ್ಪು ಕಂಡುಬಂದಲ್ಲಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

 

ದಾಳಿ ಬೆನ್ನಲ್ಲೇ ಅತೀಕ್‌ನನ್ನು ಆಸ್ಪತ್ರೆ ದಾಖಲಿಸಿಲ್ಲ ಯಾಕೆ? ಯುಪಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

click me!