ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಭೇಟಿಯಾದ ಜಾರಕಿಹೊಳಿ

By Web DeskFirst Published Nov 22, 2019, 11:20 AM IST
Highlights

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪ್ರವೀಣ ಟಕ್ಕಳಕಿಯನ್ನು ಭೇಟಿಯಾದ ರಮೇಶ್ ಜಾರಕಿಹೊಳಿ| ಉಪಚುನಾವಣೆಯಲ್ಲಿ ತಮಗೆ ಬೆಂಬಲಿಸುವಂತೆ ರಮೇಶ್ ಮನವಿ| ಟಕ್ಕಳಕಿ 6 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಬಿಡುಗಡೆ| 

ಬೆಳಗಾವಿ(ನ.22): ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪ್ರವೀಣ ಟಕ್ಕಳಕಿಯನ್ನು ಭೇಟಿ ಮಾಡಿದ್ದಾರೆ. 

ಗುರುವಾರ ಗೋಕಾಕ್ ನಗರದ ಪ್ರವೀಣ್ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಆಗಮಿಸಿದ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇದೇ ಡಿಸೆಂಬರ್ 5ಕ್ಕೆ ಗೋಕಾಕ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ವಿರೋಧಿಗಳ ಮನೆಗಳಿಗೆ‌ ಭೇಟಿ ನೀಡಿ ಬೆಂಬಲಿಸುವಂತೆ ರಮೇಶ್ ಅವರು ಮನವಿ‌‌ ಮಾಡುತ್ತಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಾಲೆಂಗಾವ್ ಬಾಂಬ್ ಸ್ಟೋಟದ ಆರೋಪಿಯಾಗಿರುವ ಪ್ರವೀಣ್ ಟಕ್ಕಳಕಿ, 6 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಬಿಡುಗಡೆಯಾಗಿದ್ದಾರೆ. ಮನೆಗೆ ಆಗಮಿಸಿದ ರಮೇಶ ಜಾರಕಿಹೊಳಿ ಅವರಿಗೆ ಹೂಮಾಲೆ ಹಾಕಿ ಪ್ರವೀಣ್ ಟಕ್ಕಳಕಿ ಪ್ರವೀಣ್ ಸನ್ಮಾನಿಸಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ. 

"

click me!