ಲಕ್ಷ್ಮೀ ಕ್ಷೇತ್ರಕ್ಕೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಎಂಟ್ರಿ

Kannadaprabha News   | Asianet News
Published : Dec 29, 2019, 02:37 PM ISTUpdated : Dec 29, 2019, 02:38 PM IST
ಲಕ್ಷ್ಮೀ  ಕ್ಷೇತ್ರಕ್ಕೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಎಂಟ್ರಿ

ಸಾರಾಂಶ

ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರವಾದ ಬೆಳಗಾವಿ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ಯಾಕೆ ? ಇಲ್ಲಿದೆ ಮಾಹಿತಿ 

ಬೆಳಗಾವಿ [ಡಿ.29]: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ. 

ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಗ್ರಾಮದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸ್ನೇಹಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. 

ಲಕ್ಷ್ಮೀ ಜಾರಕಿಹೊಳಿ ಕ್ಷೇತ್ರದಲ್ಲಿ ಇಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. ಸವದತ್ತಿ ಶಾಸಕ ಆನಂದ ಮಾಮನಿ ಕೂಡ ಇಲ್ಲಿ ಉಪಸ್ಥಿತರಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದ್ದು, ಕಾಂಗ್ರೆಸ್ ಜಾರಕಿಹೊಳಿ ಸಹೋದರ ಲಖನ್ ಸೋಲಿಸಿ ಜಯಗಳಿಸಿದ್ದರು. 

ಕಳೆದ ವಿಧಾನಸಭಾ ಚುನಾವಣೆಯಿಂದಲೂ ಬದ್ಧವೈರಿಗಳಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ವಿರೋಧಿಗಳಾಗಿದ್ದು, ಇದೀಗ ಲಕ್ಷ್ಮೀ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಟಾಂಗ್ ನೀಡಿದ್ದಾರೆ.

PREV
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್