* ಆರೋಪಿ ರಮೇಶ್, ಗೃಹ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ ಎಂದರೆ ಏನರ್ಥ?
* ಬೊಮ್ಮಾಯಿ ತಮ್ಮ ಸಚಿವ ಸ್ಥಾನ ರಾಜೀನಾಮೆ ನೀಡಬೇಕು
* ಸೀಡಿಯಲ್ಲಿರುವ ಸಂತ್ರಸ್ತೆ ಹೇಳಿಕೆ ಕೊಟ್ಟ ಮೇಲೂ ಜಾರಕಿಹೊಳಿ ಅವರನ್ನು ಬಂಧಿಸಿಲ್ಲ ಎಂದರೆ ಹೇಗೆ?
ಹುಬ್ಬಳ್ಳಿ(ಮೇ.29): ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಶುಕ್ರವಾರ ಇಲ್ಲಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ಜಾರಕಿಹೊಳಿಯನ್ನು ರಕ್ಷಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
undefined
'ರಾಮನ ಬಗ್ಗೆ ಮಾತಾಡೋ ಪಕ್ಷ, ರೇಪ್ ಆರೋಪಿ ಹೋಂ ಮಿನಿಸ್ಟರ್ ಭೇಟಿ ಮಾಡ್ತಾರೆ'
ಆರೋಪಿ ರಮೇಶ್, ಗೃಹ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ ಎಂದರೆ ಏನರ್ಥ? ಹೀಗಾಗಿ ಬೊಮ್ಮಾಯಿ ತಮ್ಮ ಸಚಿವ ಸ್ಥಾನ ರಾಜೀನಾಮೆ ನೀಡಬೇಕು. ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕು. ನ್ಯಾಯಾಧೀಶರ ಮುಂದೆ ಜಾರಕಿಹೊಳಿ ಜೊತೆ ಸೀಡಿಯಲ್ಲಿರುವ ಸಂತ್ರಸ್ತೆ ಹೇಳಿಕೆ ಕೊಟ್ಟ ಮೇಲೂ ಅವರನ್ನು ಬಂಧಿಸಿಲ್ಲ ಎಂದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.