ಶಕ್ತಿ ಪ್ರದಶರ್ನಕ್ಕೆ ರಮೇಶ್ ಜಾರಕಿಹೊಳಿ ಸಿದ್ಧತೆ : ಉಪಚುನಾವಣೆಗೆ ಭರ್ಜರಿ ತಯಾರಿ

Published : Sep 06, 2019, 12:26 PM ISTUpdated : Sep 06, 2019, 04:05 PM IST
ಶಕ್ತಿ ಪ್ರದಶರ್ನಕ್ಕೆ ರಮೇಶ್ ಜಾರಕಿಹೊಳಿ ಸಿದ್ಧತೆ : ಉಪಚುನಾವಣೆಗೆ ಭರ್ಜರಿ ತಯಾರಿ

ಸಾರಾಂಶ

ರಾಜ್ಯದಲ್ಲಿ ಅನರ್ಹಗೊಂಡ ಶಾಸಕರ 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈಗಾಗಲೇ ಹಲವು ನಾಯಕರು ಸಿದ್ಧತೆ ನಡೆಸಿದ್ದಾರೆ. ಇದೀಗ ಗೋಗಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಬೆಳಗಾವಿ [ಸೆ.06]: ರಾಜ್ಯದಲ್ಲಿ ಶೀಘ್ರ ಉಪ ಚುನಾವಣೆ ನಡೆಯಲಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಾಹುಕಾರ್ ಜಾರಕಿಹೊಳಿ ಮನೆಯ ಮುಂದೆಯೇ ಸಮಾವೇಶ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಸಜ್ಜಾಗಿದ್ದಾರೆ. 

"

ಸದ್ಯ ದೆಹಲಿಗೆ ತೆರಳಿರುವ ರಮೇಶ್ ಜಾರಕಿಹೊಳಿ ಶುಕ್ರವಾರ ಸಂಜೆ ಬೆಳಗಾವಿಗೆ ಆಗಮಿಸಲಿದ್ದು, ಅವರ ಅಳಿಯ ಅಂಬಿರಾಯ ಪಾಟೀಲ್ ನೇತೃತ್ವದಲ್ಲಿ ಸಮಾವೇಶ  ಜರುಗಲಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ಭೇಟಿ ನೀಡಿ ವಾಪಸಾಗಿದ್ದು, ಇದಾದ ಬಳಿಕವೇ ಉಪ ಚುನಾವಣೆಗಾಗಿ ಶಕ್ತಿ ಪ್ರದರ್ಶನ ಮಾಡಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು ಬಳಿಕ ಸಚಿವ ಸ್ಥಾನ ಪಡೆದಿದ್ದ ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕಳೆದುಕೊಂಡಿದ್ದರು. ಅದಾದ ಬಳಿಕ ಅತೃಪ್ತರಾಗಿದ್ದ ಅವರು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಬಳಿಕ ಶಾಸಕ ಸ್ಥಾನದಿಂದ ಅನರ್ಹವಾಗಿದ್ದು, ಇದರಿಂದ ಸ್ವಕ್ಷೇತ್ರಲದಲ್ಲಿ ಉಪ ಚುನಾವಣೆ ನಡೆಯಲಿದ್ದು, ಇದಕ್ಕೆ ಸಿದ್ಧತೆ ಆರಂಭವಾಗಿದೆ.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು