'ರಮೇಶ್ ಜಾರಕಿಹೊಳಿಗೆ ಕೊರೋನಾ ಬಂದಿದೆ'

By Suvarna News  |  First Published Apr 5, 2021, 10:26 AM IST

ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ| ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ‌ ಪ್ರಚಾರಕ್ಕೆ ಬರುತ್ತಾರೆ| ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್, ಬಾಲಚಂದ್ರ ಜಾರಕಿಹೊಳಿ ಜೊತೆ ಫೋನ್‌ನಲ್ಲಿ ಮಾತನಾಡಿದ್ದೇನೆ| ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ: ಸಚಿವ ಭೈರತಿ ಬಸವರಾಜ| 


ಬೆಳಗಾವಿ(ಏ.05): ಮಾಜಿ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಆಗಿದೆಯಂತೆ, ಹುಷಾರಾಗಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.

ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ. ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ‌ ಪ್ರಚಾರಕ್ಕೆ ಬರುತ್ತಾರೆ. ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್, ಬಾಲಚಂದ್ರ ಜಾರಕಿಹೊಳಿ ಜೊತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ. ಇಂದು ನಾನು, ನಮ್ಮೆಲ್ಲ ನಾಯಕರು ಗೋಕಾಕ್‌, ಅರಭಾವಿಗೆ ಹೋಗುತ್ತಿದ್ದೇವೆ. ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ.

Latest Videos

ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಜಯಸಾಧಿಸುವಲ್ಲಿ ಯಾವ ಸಂದೇಹವೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಜನಪರ ಕಾರ್ಯ ಹಾಗೂ ದಿ. ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನ ಮುಂದಿಟ್ಟು ಮತಯಾಚನೆ ಮಾಡುತ್ತೇವೆ. ಬೆಳಗಾವಿ ನಗರದ ಅಭಿವೃದ್ಧಿಗೆ ಇತ್ತೀಚೆಗೆ 150 ಕೋಟಿ ರೂ.‌ ಕೊಟ್ಟಿದ್ದೇವೆ. ಬೆಳಗಾವಿ ಜನತೆ ಅತಿ ಹೆಚ್ಚಿನ ಮತ ನೀಡಿ ಮಂಗಲ ಅಂಗಡಿರನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ನಿನ್ನೆ ಕುರುಬ ಸಮುದಾಯದ ಮುಖಂಡರ ಜೊತೆ ಚರ್ಚಿಸಿದ್ದೇನೆ. ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಹೇಳಿದ್ದಾರೆ. 

ಕೆಮ್ಮಿದ ಅಜ್ಜಿಗೆ ಮಾತ್ರೆ ತಗೋ ಎಂದ ಶಾಸಕಿ ಡಾ.ನಿಂಬಾಳ್ಕರ್‌

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಿದ್ದರಾಮಯ್ಯ ಆಗ್ರಹ ವಿಚಾರದ ಬಗ್ಗೆ ಮಾತನಾಡಿದ ಭೈರತಿ ಬಸವರಾಜ ಅವರು, ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿ ಏನಾಗಿದೆ ಅದನ್ನು ನೋಡಿಕೊಳ್ಳಲಿ. ಕೋವಿಡ್ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅನೇಕ ಜನಪರ ಯೋಜನೆಗಳನ್ನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ ಇಲ್ಲ ಈಶ್ವರಪ್ಪ ವಜಾ ಮಾಡಲಿ ಎಂಬ ಡಿಕೆಶಿಗೆ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಆಂತರಿಕ ವಿಷಯವಾಗಿದ್ದು, ಇದಕ್ಕೂ ಅವರಿಗೆ ಸಂಬಂಧ ಇಲ್ಲ. ಡಿ.ಕೆ. ಶಿವಕುಮಾರ್‌ ನಾಳೆ ಬೆಳಗ್ಗೆಯೇ ಸಿಎಂ ಆಗುವ ಕನಸಿನಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ದೂರವಾಣಿಯಲ್ಲಿ ಮಾತನಾಡಿದ ಗೋಕಾಕ್ ತಾಲೂಕು ಆಸ್ಪತ್ರೆ ವೈದ್ಯ ಡಾ‌.ರವೀಂದ್ರ ಅಂಟೀನ್ ಅವರು, ಏಪ್ರಿಲ್ 1 ರಂದು ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ರಮೇಶ್ ಅವರು ನಿನ್ನೆ ರಾತ್ರಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

click me!