ಓಮ್ನಿಯಲ್ಲಿ ಕೊಳೆತ ಮಹಿಳೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !

By Suvarna News  |  First Published Jan 4, 2020, 3:45 PM IST

ಓಮ್ನಿಯಲ್ಲಿ ಕೊಳೆತ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈಯ್ಯಲಾಗಿತ್ತು ಎಂದು ಆರೋಪಿಸಲಾಗಿದೆ. 


ಶಿವಮೊಗ್ಗ [ಜ.04]: ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಓಮ್ನಿಯಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. 

ತಹಸೀನಾ ಎಂಬ ಮಹಿಳೆ ಮೃತದೇಹ ಎಂದು ಗುರುತಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈಯ್ಯಲಾಗಿದೆ ಎಂದು ಆಕೆಯ ಪತಿ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. 

Tap to resize

Latest Videos

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮೃತ ಮಹಿಳೆ ತಹಸೀನಾ ಮತಿ ಹಾಗೂ ತಾಯಿ, ಸಹೋದರಿ ಪ್ರತಿಭಟನೆ ನಡೆಸಿದ್ದು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. 

ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕುಟುಂಬಸ್ಥರು ಮನವಿ ಮಾಡಿದ್ದು, ಆರೋಪಿಗಳ ಬಂಧನಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. 

ಕಾರಿನಲ್ಲಿ ಪತ್ತೆಯಾಯ್ತು ಕೊಳೆತು ಹೋದ ಮಹಿಳೆ ಶವ ...

ಡಿಸೆಂಬರ್ 22 ರಂದು ತಹಸೀನಾ ಕೊಲೆ ನಡೆದಿದ್ದು, ಜನವರಿ 2 ರಂದು ಶಿವಮೊಗ್ಗದ ವಿದ್ಯಾನಗರ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲ್ಲಿಸಲಾಗಿದ್ದ ಓಮ್ನಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ತಹಸೀನಾ ಮೇಲೆ ನಾಲ್ವರು ಅತ್ಯಾಚಾರ ಎಸಗಿ ಆ್ಯಸಿಡ್ ಎರಡಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

click me!