
ಉತ್ತರಕನ್ನಡ(ಆ.23): ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನಿನ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಿಳಿ ಹಾವು ಪ್ರತ್ಯಕ್ಷಗೊಂಡು ಜನರಲ್ಲಿ ಭೀತಿ ಸೃಷ್ಠಿಸಿತ್ತು. ಬಳಿಕ ಮಾಹಿತಿ ಮೇರೆಗೆ ಉರಗ ತಜ್ಞ ಪವನ್ ಎಮ್ ನಾಯ್ಕ ಸ್ಥಳಕ್ಕೆ ಭೇಟಿ ಈ ಬಿಳಿ ಹಾವು ಹೆಬ್ಬಾವು ಎಂದು ತಿಳಿಸುವ ಮೂಲಕ ಜನರ ಭೀತಿಯನ್ನು ದೂರ ಮಾಡಿದ್ದಾರೆ.
ಬಿಳಿ ಹೆಬ್ಬಾವನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯಲಾಗುತ್ತಿದ್ದು, ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ ಎನ್ನಲಾಗಿದೆ.
ಪರಹಿತಕ್ಕಾಗಿ ಸ್ವಹಿತ ತ್ಯಾಗ ಮಾಡೋಣ : ರಾಘವೇಶ್ವರ ಶ್ರೀ
ಆದರೆ ಅಲ್ಬಿನೋ ಹಾವುಗಳಲ್ಲಿ ಕಣ್ಣು ಸಹ ಕೆಂಪು ಮಿಶ್ರಿತ ಬಿಳಿ ಬಣ್ಣ ಇರುವುದರಿಂದ ಮಿರ್ಜಾನಿನಲ್ಲಿ ಸಿಕ್ಕಿದ ಹಾವಿನ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು, ಇನ್ನರ್ಧ ಕಪ್ಪಿರೋ ಕಾರಣ ಇದನ್ನು ಅಲ್ಬಿನೋ ಹಾವಿನ ಗುಂಪಿಗೆ ಸೇರಿಲು ಸಾಧ್ಯವಿಲ್ಲ. ಆದರೂ, ಇದು ಕರ್ನಾಟಕದಲ್ಲಿ ಸಿಕ್ಕಿರೋ 2 ನೇ ದಾಖಲೆ ಹಾಗೂ ಹಾವನ್ನು ಸುರಕ್ಷಿತ ಜಾಗಕ್ಕೆ ಬಿಡಲಾಗಿದೆ ಎಂದು ಪವನ್ ನಾಯ್ಕ ಮಾಹಿತಿ ನೀಡಿದ್ದಾರೆ.